ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿವಮೊಗ್ಗ: ಮಾದಕ ವಸ್ತುಗಳ ವಿರೋಧಿ ಅಭಿಯಾನ

ಶಿವಮೊಗ್ಗ: ಮಾದಕ ವಸ್ತುಗಳ ವಿರೋಧಿ ಅಭಿಯಾನಕ್ಕೆ ಇಂದು ಚಾಲನೆ ನೀಡಲಾಯಿತು. ನಗರದ ಡಿಸಿಸಿ ಬ್ಯಾಂಕ್ ಆವರಣದಲ್ಲಿ ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದವತಿಯಿಂದ ಆಯೋಜಿಸಲಾಗಿದ್ದ ಈ ಅಭಿಯಾನಕ್ಕೆ ಸಂಸದ ಬಿ.ವೈ ರಾಘವೇಂದ್ರ ಸಹಿ ಮಾಡುವುದರ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದರು.

ರಾಜ್ಯದಲ್ಲಿ ಸೇರಿದಂತೆ, ಶಿವಮೊಗ್ಗದಲ್ಲಿ ಅತಿ ಹೆಚ್ಚು ಮಾದಕ ವಸ್ತುಗಳ ಮಾರಾಟ ಮತ್ತು ಬಳಕೆಯಾಗುತ್ತಿದ್ದು, ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ, ಪತ್ರಕರ್ತರ ಸಂಘ ಮುಂದೆ ಬಂದಿರುವುದು ಸಂತಸ ತಂದಿದೆ ಎಂದು ಸಂಸದ ಬಿ.ವೈ ರಾಘವೇಂದ್ರ ಹೇಳಿದರು. ಅಲ್ಲದೇ, ಯುವ ಜನರು ಮಾದಕತೆಯ ದಾಸ್ಯರಾಗುತ್ತಿರುವುದು ಆತಂಕಕಾರಿ ವಿಚಾರವಾಗಿದ್ದು, ಇದನ್ನು ತಡೆಗಟ್ಟುವುದು ಅನಿವಾರ್ಯವಾಗಿದೆ ಎಂದು ಹೇಳಿದರು. ಇದೆ ವೇಳೆ ನೂತನವಾಗಿ ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಅಸ್ತಿತ್ವಕ್ಕೆ ಬಂದಿರುವುದಕ್ಕೆ ಸದುಭ ಹಾರೈಸಿದರು.

ಈ ವೇಳೆ ಅಭಿಯಾನದಲ್ಲಿ ತಜ್ಞ ವೈದ್ಯ ಡಾ. ಧನಂಜಯ್ ಸರ್ಜಿ, ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಗೋಪಾಲ್ ಯಡಗೆರೆ, ಪ್ರೆಸ್ ಟ್ರಸ್ಟ್ ಅಧ್ಯಕ್ಷ ಎನ್. ಮಂಜುನಾಥ್, ಅಪರ ಜಿಲ್ಲಾಧಿಕಾರಿ ನಾಗೇಂದ್ರ ಹೊನ್ನಾಳಿ ಸೇರಿದಂತೆ ಹಲವರು ಭಾಗಿಯಾಗಿದ್ದರು.

Edited By :
PublicNext

PublicNext

16/09/2022 10:28 pm

Cinque Terre

30.23 K

Cinque Terre

0