ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿವಮೊಗ್ಗ: ಹಿಂದುಳಿದ ವರ್ಗಗಳಿಗೆ ಕಾಂಗ್ರೆಸ್ ನವರು ಏನೂ ಮಾಡಿಲ್ಲ: ಕೆ.ಎಸ್. ಈಶ್ವರಪ್ಪ

ಶಿವಮೊಗ್ಗ: ರಾಜ್ಯ ಬಿಜೆಪಿ ವತಿಯಿಂದ ಅ. 30 ರಂದು ಕಲಬುರಗಿಯಲ್ಲಿ ಹಿಂದುಳಿದ ವರ್ಗಗಳ ಜಾಗೃತಿ ಸಮಾವೇಶ ನಡೆಯಲಿದ್ದು, ಈ ಹಿನ್ನಲೆಯಲ್ಲಿ ಅ. 9 ರಂದು ಹುಬ್ಬಳ್ಳಿಯಲ್ಲಿ ಸಮಾವೇಶದ ಪೂರ್ವಭಾವಿ ಸಭೆ ನಡೆಯಲಿದೆ ಎಂದು ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ. ಇಂದು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಸಮಾವೇಶದ ಹಿನ್ನಲೆಯಲ್ಲಿ ಪೂರ್ವಭಾವಿ ಪ್ರವಾಸವನ್ನು ಪಕ್ಷದ ಮುಖಂಡರು ಹಮ್ಮಿಕೊಂಡಿದ್ದು, 5 ತಂಡ ರಚಿಸಲಾಗಿದೆ. ಪೂರ್ವಭಾವಿ ಸಭೆಯಲ್ಲಿ 224 ವಿಧಾನಸಭಾ ಕ್ಷೇತ್ರಗಳಿಂದಲೂ ಸುಮಾರು 3 ಸಾವಿರ ಹಿಂದುಳಿದ ವರ್ಗದ ಪ್ರಮುಖ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ. ಅ. 30 ರ ಕಲಬುರಗಿ ಸಮಾವೇಶದಲ್ಲಿ ಸುಮಾರು 4 ಲಕ್ಷಕ್ಕೂ ಹೆಚ್ಚು ಜನ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದರು.

ಹಿಂದುಳಿದ ವರ್ಗಗಳಿಗೆ ಕಾಂಗ್ರೆಸ್ ನವರು ಏನೂ ಮಾಡಿಲ್ಲ. ಖಾಲಿ ಡಬ್ಬ ಅಲುಗಾಡಿಸಿ ಶಬ್ಧ ಜಾಸ್ತಿ ಮಾಡಿದ್ದು ಬಿಟ್ಟರೆ ಹಿಂದುಳಿದ ವರ್ಗಕ್ಕೆ ಅನ್ಯಾಯ ಮಾಡಿದ್ದಾರೆ. ಹಿಂದುಳಿದ ವರ್ಗದ ಸಮಾವೇಶ ಮಾಡದೇ ಸಿದ್ಧರಾಮೋತ್ಸವ ಮಾಡಿದ್ದಾರೆ. ಈಗಾಗಲೇ ಡಿಕೆಶಿ ಸರ್ವಾಧಿಕಾರಿ ಧೋರಣೆ ವಿರುದ್ಧ ದಿನೇಶ್ ಗುಂಡೂರಾವ್, ಆರ್.ವಿ. ದೇಶಪಾಂಡೆ ವಿರೋಧ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ವಿಭಜನೆಯತ್ತ ಸಾಗಿದೆ. ಹಿಂದುಳಿದ ವರ್ಗದ ಬಗ್ಗೆ ಕಾಂತರಾಜ್ ವರದಿಯನ್ನು 140 ಕೋಟಿ ರೂ. ವೆಚ್ಚದಲ್ಲಿ ತಯಾರಿಸಿ ಅದನ್ನು ವಿಧಾನಸಭೆಯಲ್ಲಿ ಮಂಡಿಸಲಿಲ್ಲ. ಆ ವರದಿಗೆ ಮುಖ್ಯ ಕಾರ್ಯದರ್ಸಿ ಸಹಿಯನ್ನೇ ಹಾಕಿಲ್ಲ. ಮೂಗಿಗೆ ತುಪ್ಪ ಸವರಿ ಕಾಂಗ್ರೆಸ್ ನವರು ಹಿಂದುಳಿದ ವರ್ಗಕ್ಕೆ ಮೋಸ ಮಾಡಿದ್ದಾರೆ. ಹಿಂದುಳಿದವರ ಬಗ್ಗೆ ಮಾತನಾಡಲು ಕಾಂಗ್ರೆಸ್ ಗೆ ನೈತಿಕತೆ ಇಲ್ಲ ಎಂದರು.

ಪೇ ಸಿಎಂ ಪೋಸ್ಟರ್ ಬಗ್ಗೆ ಮಾತನಾಡಿದ ಈಶ್ವರಪ್ಪ, ಕಾಂಗ್ರೆಸ್ ಇಷ್ಟು ನೀಚಮಟ್ಟಕ್ಕೆ ಇಳಿಬಾರದಿತ್ತು. ಕಂಟ್ರ್ಯಾಕ್ಟ್ ಅಸೋಸಿಯೇಷನ್ ಅಧ್ಯಕ್ಷ ಕಾಂಗ್ರೆಸಿಗರ ಚೇಲಾ ಕೆಂಪಣ್ಣ ಪ್ರಧಾನಿ ಮೋದಿಗೂ ಪತ್ರ ಬರೆದು ಆರೋಪ ಮಾಡಿದರು. ಆದರೆ, 40 ಪರ್ಸೆಂಟ್ ಕಮಿಷನ್ ಬಗ್ಗೆ ಒಂದೇ ಒಂದು ದಾಖಲೆ ಬಿಡುಗಡೆಯಾಗಿಲ್ಲ. ಚುನಾವಣೆ ನಡೆದರೆ ಕಾಂಗ್ರೆಸ್ ಮತ ಬ್ಯಾಂಕ್ ನಲ್ಲಿ ಶೇ. 40 ರಷ್ಟು ಮತಗಳು ಕಡಿಮೆಯಾಗಲಿವೆ ಎಂದಿದ್ದಾರೆ.

Edited By : Nagesh Gaonkar
PublicNext

PublicNext

23/09/2022 10:55 pm

Cinque Terre

31.37 K

Cinque Terre

3

ಸಂಬಂಧಿತ ಸುದ್ದಿ