ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿವಮೊಗ್ಗ : ಮಧು ಬಂಗಾರಪ್ಪಗೆ ಶಿವಮೊಗ್ಗಕ್ಕೆ ಅದ್ಧೂರಿ ಸ್ವಾಗತ

ಶಿವಮೊಗ್ಗ : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷ ಹಾಗೂ ಪ್ರಣಾಳಿಕೆ, ನೀತಿ ಮತ್ತು ದೂರದೃಷ್ಠಿ ಸಮಿತಿ 2023ರ ಉಪಾಧ್ಯಕ್ಷ ಹಾಗೂ ನೂತನವಾಗಿ ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ ಆಧ್ಯಕ್ಷರಾಗಿ ಆಯ್ಕೆಯಾದ ಮಧು ಬಂಗಾರಪ್ಪ ಇಂದು ನಗರಕ್ಕೆ ಆಗಮಿಸಿದ ಸಂದರ್ಭದಲ್ಲಿ ಅದ್ಧೂರಿ ಸ್ವಾಗತ ನೀಡಲಾಯಿತು.

ನಗರದ ಎಂ.ಆರ್.ಎಸ್. ವೃತ್ತದಿಂದ ಬೈಕ್ ರ್‍ಯಾಲಿ ಮೂಲಕ ಜಿಲ್ಲಾ ಕಾಂಗ್ರೆಸ್ ಕಚೇರಿಯವರೆಗೆ ಕರೆತರಲಾಯಿತು. ನಂತರ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಾಜಿ ಸಚಿವ, ಕೆಪಿಸಿಸಿ ಉಪಾಧ್ಯಕ್ಷ ಹೆಚ್.ಎಂ. ರೇವಣ್ಣ ಮಾತನಾಡಿ, ಇಂದಿನ ಅದ್ಧೂರಿ ಸ್ವಾಗತ ನೋಡಿದರೆ ಶಿವಮೊಗ್ಗದ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಹೊಸ ಚೈತನ್ಯ ಮೂಡಿದೆ. ಜಿಲ್ಲೆಯಲ್ಲಿ ಕಾಂಗ್ರೆಸ್ ಮತ್ತೆ ಎಲ್ಲಾ ಸ್ಥಾನಗಳನ್ನು ಗೆಲ್ಲುವುದು ಖಚಿತ ಎಂಬ ಭಾವನೆ ಬಂದಿದೆ ಎಂದರು.

ಶಿವಮೊಗ್ಗ ಜಿಲ್ಲೆ ಸಮಾಜವಾದಿ ನೆಲೆಯಾಗಿದ್ದು, ರಾಜಕೀಯ ದಿಗ್ಗಜರನ್ನು ನೀಡಿದ ಜಿಲ್ಲೆಯಾಗಿದೆ. ಸಾಮಾಜಿಕ ನ್ಯಾಯದ ಕಳಕಳಿ ಇದ್ದ ಹಾಗೂ ಹೋರಾಟಕ್ಕೆ ಒತ್ತು ಕೊಟ್ಟ ಜಿಲ್ಲೆಯಾಗಿದ್ದು, ಜನರ ಮನಸ್ಸಿನಲ್ಲಿ ಕಾಂಗ್ರೆಸ್ ಇನ್ನೂ ಗಟ್ಟಿಯಾಗಿ ಉಳಿದಿದೆ. ನಾನು ಭಾರತ್ ಜೋಡೋ ಯಾತ್ರೆಯ ಶಿವಮೊಗ್ಗ ಜಿಲ್ಲಾ ಉಸ್ತುವಾರಿಯಾಗಿದ್ದೇನೆ. ಶಿವಮೊಗ್ಗ ರಾಜ್ಯದಲ್ಲಿ ರಾಜಕೀಯ ಕೇಂದ್ರ ಸ್ಥಾನ ಎಂದರೆ ತಪ್ಪಾಗಲಾರದು.

ಭಾರಿ ಭ್ರಷ್ಟಾಚಾರ ಮತ್ತು ಹಗರಣಗಳ ಸರ್ಕಾರವಾದ ಬಿಜೆಪಿ ಸರ್ಕಾರವನ್ನು ಕಿತ್ತೊಗೆದು ಪುನಃ ಕಾಂಗ್ರೆಸ್ ಅನ್ನು ಜಿಲ್ಲೆಯಲ್ಲಿ ಪ್ರಬಲವಾಗಿ ಸಂಘಟಿಸಬೇಕಿದೆ. ಇವತ್ತಿನ ಉತ್ಸಾಹ ಮುಂದಿನ ದಿನಗಳಲ್ಲಿ ಜಿಲ್ಲೆಯ ಎಲ್ಲಾ ಕಾರ್ಯಕರ್ತರಲ್ಲೂ ಹೊಸ ಚೈತನ್ಯ ತರಲಿ. ಮಧು ಬಂಗಾರಪ್ಪ ಅವರಿಗೆ ರಾಜ್ಯಾದ್ಯಂತ ವರ್ಚಸ್ಸು ಇದೆ. ಅದನ್ನು ಗಮನಿಸಿದ ಹೈಕಮಾಂಡ್ ಅವರಿಗೆ ಮಹತ್ತರ ಜವಾಬ್ದಾರಿ ನೀಡಿದೆ. ಅವರ ಕಾರ್ಯಕ್ಷೇತ್ರ ಶಿವಮೊಗ್ಗ ಜಿಲ್ಲೆಗೆ ಸೀಮಿತವಾಗದೇ ರಾಜ್ಯದೆಲ್ಲೆಡೆ ವಿಸ್ತರಿಸಲಿ. ಅರಸು ಮತ್ತು ಇಂದಿರಾಗಾಂಧಿಯ ಕಲ್ಪನೆಯಾಗಿದ್ದ ಎಲ್ಲರಿಗೂ ಸಮ ಬಾಳು ಸಮ ಪಾಲು ಎಂಬುದನ್ನು ಜನರಿಗೆ ಮನದಟ್ಟು ಮಾಡುವಂತಾಗಲಿ ಎಂದರು.

ವೇದಿಕೆಯಲ್ಲಿರುವ ಎಲ್ಲರೂ ‘ಪೇ ಸಿಎಂ’ ಕರಪತ್ರ ತೋರಿಸುವ ಮೂಲಕ ಬಿಜೆಪಿ ಸರ್ಕಾರದ ಅಣಕು ಮಾಡಿದರು. ಕರಪತ್ರದಲ್ಲಿರುವ ನಂಬರ್ ಗೆ ಮಿಸ್ಡ್ ಕಾಲ್ ಕೊಡುವಂತೆ ಪ್ರತಿ ಕ್ಷೇತ್ರದಿಂದ ವಾರಕ್ಕೆ ಕನಿಷ್ಠ 10 ಸಾವಿರ ಕಾಲ್ ಮಾಡಿ ಸರ್ಕಾರಕ್ಕೆ ಎಚ್ಚರಿಸುವಂತೆ ಕಾರ್ಯಕರ್ತರಲ್ಲಿ ವಿನಂತಿಸಿದರು.

Edited By : Nagesh Gaonkar
PublicNext

PublicNext

24/09/2022 11:02 pm

Cinque Terre

42.11 K

Cinque Terre

0

ಸಂಬಂಧಿತ ಸುದ್ದಿ