ಶಿವಮೊಗ್ಗ : ಕಾಂಗ್ರೆಸ್ ಸದಸ್ಯತ್ವಕ್ಕೆ ರಾಜಿನಾಮೆ ನೀಡುತ್ತಿದ್ದು, ಮುಂದಿನ ನಡೆ ಏನು ಎಂಬುದನ್ನು ತಮ್ಮ ಬೆಂಬಲಿಗರೊಂದಿಗೆ ಚರ್ಚಿಸಿ ಸದ್ಯದಲ್ಲೇ ತೀರ್ಮಾನ ತೆಗೆದುಕೊಳ್ಳುವುದಾಗಿ ಕಾಂಗ್ರೆಸ್ ಮುಖಂಡರಾಗಿದ್ದ ರಾಜು ತಲ್ಲೂರು ತಿಳಿಸಿದ್ದಾರೆ.
ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ ಒಗ್ಗಟ್ಟು ಇಲ್ಲವಾಗಿದೆ. ಪಕ್ಷಕ್ಕೆ ಶಕ್ತಿ ತುಂಬುವ ಕೆಲಸವೂ ಆಗುತ್ತಿಲ್ಲ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸುಂದರೇಶ್ ಸಂಪೂರ್ಣ ನಿಷ್ಕ್ರಿಯರಾಗಿದ್ದಾರೆ. ಇದೆಲ್ಲವನ್ನು ನೋಡಿಕೊಂಡು ಸುಮ್ಮನಿರಲು ಸಾಧ್ಯವಿಲ್ಲ. ನಿಜಕ್ಕೂ ಬೇಸರವಾಗಿದೆ. ಹೀಗಾಗಿ ಈ ಒಂದು ತೀರ್ಮಾನ ಕೈಗೊಳ್ಳುವುದು ಅನಿವಾರ್ಯವಾಗಿದೆ ಎಂದರು.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಆಗಿರುವ ಎಚ್.ಎಸ್. ಸುಂದರೇಶ್ ಅವರಿಂದ ಪಕ್ಷ ಚೇತರಿಕೆ ಕಾಣದು. ವ್ಯಕ್ತಿಪೂಜೆಯಲ್ಲಿ ಅವರು ನಿರತರಾಗಿದ. ಪಕ್ಷಕ್ಕೆ ಹೊಸ ಪದಾಧಿಕಾರಿಗಳನ್ನು ನೇಮಿಸಿಲ್ಲ. ಇದೆಲ್ಲವೂ ಪಕ್ಷ ಸಂಘಟನೆಗೆ ಬಾರಿ ಹಿನ್ನೆಡೆಯಾಗಿದೆ ಎಂದು ಆರೋಪಿಸಿದರು. ಜಿಲ್ಲಾ ಕಾಂಗ್ರೆಸಿನಲ್ಲಿ ಒಗ್ಗಟ್ಟಿಲ್ಲ.
ಇದರಿಂದಾಗಿ ಕಾರ್ಯಕರ್ತರು ಬೇಸರಗೊಂಡಿದ್ದಾರೆ. ಈ ಬಗ್ಗೆ ರಾಜ್ಯದ ಮುಖಂಡರಿಗೆ ಮಾಹಿತಿ ನೀಡಿದ್ದೆ. ಕೆಲಸ ಮಾಡಲು ಮನಸ್ಸಿಲ್ಲದವರು ಪಕ್ಷದಲ್ಲಿದ್ದಾರೆ. ಇದರಿಂದ ನಿಷ್ಕ್ರಿಯ ಪಕ್ಷದಲ್ಲಿರಬಾರದೆಂದು ತೀರ್ಮಾನಿಸಿ ಕಾಂಗ್ರೆಸ್ ತ್ಯಜಿಸುತ್ತಿರುವುದಾಗಿ ಹೇಳಿದ್ದಾರೆ. ಬಿಜೆಪಿ ಸೇರುವ ಬಗ್ಗೆ ತಮ್ಮ ಬೆಂಬಲಿಂಗರೊಂದಿಗೆ ಕುಳಿತು ಚರ್ಚೆ ನಡೆಸಿ ತೀರ್ಮಾನಿಸಲಾಗುವುದು ಎಂದರು.
PublicNext
26/09/2022 06:35 pm