ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿವಮೊಗ್ಗ: SDPI, PFI ದೇಶದ್ರೋಹಿ ಸಂಘಟನೆ; ಮಾಜಿ ಸಚಿವ ಈಶ್ವರಪ್ಪ ಕಿಡಿ

ಶಿವಮೊಗ್ಗ: ಕೇಂದ್ರ ಹಾಗೂ ರಾಜ್ಯದಲ್ಲಿರುವ ಬಿಜೆಪಿ ಸರ್ಕಾರ ಜನಪರ ಆಡಳಿತ ನೀಡುತ್ತಿದ್ದು, ಎಲ್ಲಾ ವರ್ಗಗಳ ಅಭಿವೃದ್ಧಿಗೆಂದು ಹಲವಾರು ಯೋಜನೆಗಳನ್ನು ನೀಡಿದೆ. ಇನ್ನು, ದೇಶದಲ್ಲಿ ಕಾಂಗ್ರೆಸ್ ಉಳಿಸುವುದಿಲ್ಲ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಗುಡುಗಿದ್ದಾರೆ.

ಇಂದು ಶಿವಮೊಗ್ಗ ಶುಭ ಮಂಗಳ ಸಮುದಾಯ ಭವನದಲ್ಲಿ ನಡೆದ ಬಿಜೆಪಿ ಹಿಂದುಳಿದ ವರ್ಗಗಳ ಜಾಗೃತಿ ಸಂಯೋಜಕ ಸಮಾವೇಶದ ಪೂರ್ವಭಾವಿ ಸಭೆಯ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.

ಕೇವಲ ಎರಡು ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಇದೆ. ಇನ್ನೂ ರಾಜಸ್ಥಾನದ ಕಾಂಗ್ರೆಸ್ ನಲ್ಲಿ ಭಿನ್ನಾಭಿಪ್ರಾಯವಿದೆ. ಅಂದು ಗಾಂಧೀಜಿಯವರ ಮಾತು ಕೇಳಲಿಲ್ಲ. ಈಗ ದೇಶದಲ್ಲಿ ಕಾಂಗ್ರೆಸ್ ವಿಸರ್ಜನೆ ಆಗುತ್ತಿದೆ. ಸೋನಿಯಾ, ಪ್ರಿಯಾಂಕಾ ಮತ್ತು ರಾಹುಲ್ ಕಾಲು ಇಟ್ಟ ಜಾಗದಲ್ಲಿ ಕಾಂಗ್ರೆಸ್ ಭಸ್ಮ ಆಗಿದೆ ಎಂದು ಲೇವಡಿ ಮಾಡಿದರು.

ಹಿಜಾಬ್ ಕುರಿತು ಕಾಂಗ್ರೆಸ್ ನಾಯಕರು ಬೆಂಬಲ ನೀಡಿದರು. ಹಿಂದೂ, ಮುಸ್ಲಿಮರನ್ನು ದೂರ ಮಾಡಿದರು. ಕಾಂಗ್ರೆಸ್ ಪಕ್ಷ ಒಡೆದು ಆಳುವ ನೀತಿ ಮಾಡುತ್ತಿದೆ. ಶಿವಮೊಗ್ಗ ಜಿಲ್ಲೆ ಹಿಂದುತ್ವದ ನೆಲೆ ಹೊಂದಿದೆ.

17 ರಾಜ್ಯಗಳಲ್ಲಿ ರಾಷ್ಟ್ರದ್ರೋಹಿ ಚಟುವಟಿಕೆಗಳಲ್ಲಿ ತೊಡಗಿದ 175 ಜನರ ಬಂಧನವಾಗಿದೆ. ಇದು ಸ್ಯಾಂಪಲ್ ಕ್ರಮ ಆಗಿದೆ. ಅಮಿತ್ ಷಾ ಖಡಕ್ ನಿರ್ಧಾರ ತೆಗೆದುಕೊಂಡಿದ್ದಾರೆ. ಯಾವುದೇ ವೋಟ್ ಬ್ಯಾಂಕ್ ರಾಜಕಾರಣ ಮಾಡದೇ ಕಠಿಣ ಕ್ರಮ ತೆಗೆದುಕೊಂಡಿದ್ದಾರೆ.

ಎಸ್ ಡಿಪಿಐ ಮತ್ತು ಪಿಎಫ್ ಐ ದೇಶದ್ರೋಹಿ ಸಂಘಟನೆಗಳಾಗಿವೆ ಎಂದು ಈಶ್ವರಪ್ಪ ಕಿಡಿ ಕಾರಿದ್ದಾರೆ.

ಅ. 9ರಂದು ಹುಬ್ಬಳ್ಳಿಯಲ್ಲಿ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಇದಕ್ಕೆ ಒಂದು ಮಂಡಲದಿಂದ ಹತ್ತು ಜನರು ಸಭೆಗೆ ಹಾಜರಾಗಬೇಕು. ಸಭೆಗೆ ಯಾರು ಆಗಮಿಸಬೇಕು ಎಂಬುದನ್ನು ಬಿಜೆಪಿ ಪ್ರಮುಖರು ತೀರ್ಮಾನ ಮಾಡುತ್ತಾರೆ. ಹತ್ತು ಜನ ಹಾಜರಾಗುವವರಲ್ಲಿ ಇಬ್ಬರು ಮಹಿಳೆಯರು ಇರಬೇಕು. ಅಲ್ಲದೆ, ಗುಲ್ಬರ್ಗದಲ್ಲಿ ಸಭೆ ನಡೆಯಲಿದೆ. ಇದಕ್ಕೂ ಕೂಡ ಜಿಲ್ಲೆಯಿಂದ ಆಯ್ದ ಬಿಜೆಪಿ ಕಾರ್ಯಕರ್ತರು ಸಭೆಗೆ ಹಾಜರಾಗಬೇಕು ಎಂದರು.

ಕಾರ್ಯಕ್ರಮದಲ್ಲಿ ಶಾಸಕರಾದ ಕುಮಾರ್ ಬಂಗಾರಪ್ಪ, ಕೆ.ಪಿ. ನಂಜುಂಡಿ, ಬಿಜೆಪಿ ಒಬಿಸಿ ಮೋರ್ಚಾ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ ಪಾಲ್, ಬಿಜೆಪಿ ಒಬಿಸಿ ಮೋರ್ಚಾ ಜಿಲ್ಲಾಧ್ಯಕ್ಷ ಮಾಲತೇಶ್, ಪ್ರಮುಖರಾದ ಶಿವರಾಜ್ ವಿ. ರಾಜು ಮತ್ತಿತರರು ಉಪಸ್ಥಿತರಿದ್ದರು.

Edited By : Manjunath H D
PublicNext

PublicNext

27/09/2022 08:54 pm

Cinque Terre

29.9 K

Cinque Terre

7

ಸಂಬಂಧಿತ ಸುದ್ದಿ