ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿವಮೊಗ್ಗ: ಪಿಎಫ್‌ಐ ಮುಖಂಡರ ಮನೆ ಮೇಲೆ ದಾಳಿ ನಡೆದಿರುವುದು ಸ್ವಾಗತಾರ್ಹ: ಕೆ.ಎಸ್. ಈಶ್ವರಪ್ಪ

ಶಿವಮೊಗ್ಗ: ಪಿಎಫ್‌ಐ ಮುಖಂಡರ ಮನೆ ಮೇಲೆ ದಾಳಿ ನಡೆದಿರುವುದು ಸ್ವಾಗತಾರ್ಹ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ. ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಎಸ್‌ಡಿಪಿಐ, ಪಿಎಫ್‌ಐ ಮುಖಂಡರ ಮನೆ ಮೇಲೆ ಪೊಲೀಸರ ದಾಳಿ ವಿಚಾರಕ್ಕೆ ಹರ್ಷ ವ್ಯಕ್ತಪಡಿಸಿದ್ದಾರೆ.

ಇಂತಹ ಸಂದರ್ಭದಲ್ಲಿ ಇನ್ನು ಕಠಿಣ ಕ್ರಮ ಆಗಬೇಕು. ಕಾಂಗ್ರೆಸ್ ಕೂಡ ಈ ಬಗ್ಗೆ ಧ್ವನಿ ಎತ್ತಬೇಕು ಎಂದು ಹೇಳಿದ್ದಾರೆ. ಇದುವರೆಗೆ ಕಾಂಗ್ರೆಸ್‌ನ ಯಾವೊಬ್ಬ ನಾಯಕರೂ ಈ ಬಗ್ಗೆ ಮಾತನಾಡಿಲ್ಲ. ಇಂತಹ ಮುಸ್ಲಿಂ ಸಂಘಟನೆಗಳನ್ನು ಕಾಂಗ್ರೆಸ್ ಇದುವರೆಗೆ ಮಟ್ಟ ಹಾಕಿಲ್ಲ. ದೇಶದಲ್ಲಿ ಬಿಜೆಪಿ ಸರ್ಕಾರವಿದೆ. ರಾಷ್ಟ್ರದ್ರೋಹಿ ಚಟುವಟಿಕೆಗಳಿಗೆ ಬಿಜೆಪಿ ಸರ್ಕಾರ ಬೆಂಬಲಿಸುವುದಿಲ್ಲ. ಕೇಂದ್ರ ಸರಕಾರ ಈ ಮೂಲಕ ರಾಷ್ಟ್ರದ್ರೋಹಿ ಸಂಘಟನೆಗಳಿಗೆ ಈ ಸಂಘಟನೆಗಳ ಪ್ರಮುಖರಿಗೆ ವಶಕ್ಕೆ ಪಡೆಯುವ ಮೂಲಕ ಸಂದೇಶವನ್ನು ನೀಡಿದೆ. ರಾಷ್ಟ್ರದ್ರೋಹಿ ಎಸ್‌ಡಿಪಿಐ, ಪಿಎಫ್‌ಐ ಸಂಘಟನೆಯನ್ನು ರಾಷ್ಟ್ರ ಭಕ್ತ ಮುಸಲ್ಮಾನರು ಖಂಡಿಸಬೇಕೆಂದು ಹೇಳಿದ್ದಾರೆ.

ಯುವ ಕಾಂಗ್ರೆಸ್ ಮುಖಂಡ ನಲಪಾಡ್, ನಿರುದ್ಯೋಗ ಸಮಸ್ಯೆಯಿಂದಾಗಿ ಯುವಕರು, ಭಯೋತ್ಪಾದನಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುತ್ತಿದ್ದಾರೆಂದು ಹೇಳಿಕೆ ವಿಚಾರಕ್ಕೆ ಈಶ್ವರಪ್ಪ ಗರಂ ಆಗಿದ್ದಾರೆ. ನಲಪಾಡ್ ಒಬ್ಬ ಅಯೋಗ್ಯ, ಆತ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದವನು. ಅವನ ಹಣೆಬರಹ ಅಷ್ಟೇ. ಅವನು ಮೊದಲು ಎಸ್‌ಡಿಪಿಐ, ಪಿಎಫ್‌ಐ ಸಂಘಟನೆ ಖಂಡಿಸಲಿ. ಖಂಡನೆ ಬಳಿಕ ಬಜರಂಗದಳ, ಆರ್‌ಎಸ್‌ಎಸ್ ಬಗ್ಗೆ ಮಾತನಾಡಲಿ ಎಂದು ತಿರುಗೇಟು ನೀಡಿದ್ದಾರೆ.

Edited By : Nagaraj Tulugeri
PublicNext

PublicNext

27/09/2022 10:59 pm

Cinque Terre

17.77 K

Cinque Terre

6

ಸಂಬಂಧಿತ ಸುದ್ದಿ