ಶಿವಮೊಗ್ಗದಲ್ಲಿ ಇಂದು ಕಾಂಗ್ರೆಸ್ ಕಾರ್ಯಕರ್ತರು ಮತ್ತು ಮುಖಂಡರು, ಭಾರತ್ ಜೋಡೋ ಯಾತ್ರೆ ಹಿನ್ನೆಲೆಯಲ್ಲಿ, ಕಾಲ್ನಡಿಗೆ ಜಾಥಾ ನಡೆಸಿದ್ದಾರೆ.
ಭಾರತ ಐಕ್ಯತಾ ಯಾತ್ರೆ ಬೆಂಬಲಿಸಿ ಕಾಲ್ನಡಿಗೆ ಜಾಥಾ ನಡೆಸಿದ ಕಾಂಗ್ರೆಸ್ಸಿಗರು, ನಗರದ ಶಿವಪ್ಪನಾಯಕ ಪ್ರತಿಮೆ ಮುಂಭಾಗ ಜಾಥಾಗೆ ಚಾಲನೆ ನೀಡಿದರು. ಈ ಜಾಥಾವೂ ನಗರದ ಮುಖ್ಯ ರಸ್ತೆಗಳಲ್ಲಿ ಸಾಗಿತು.
ಈ ಕಾಲ್ನಡಿಗೆ ಜಾಥಾದಲ್ಲಿ ನೂರಾರು ಜನ ಕಾರ್ಯಕರ್ತರು ಭಾಗಿಯಾಗಿ, ಕಾಂಗ್ರೆಸ್ ಪರ ಘೋಷಣೆ ಕೂಗಿದರು. ಜೊತೆಗೆ ಪರಸ್ಪರ ಸಿಹಿ ವಿತರಿಸಿ ಘೋಷಣೆ ಕೂಗಿದರು. ರಾಹುಲ್ ಗಾಂಧಿಯವರ ಪಾದಯಾತ್ರೆಗೆ ಬೆಂಬಲಿಸಿ ನಗರದಲ್ಲಿ ಜಾಥಾ ನಡೆಸಲಾಯಿತು.
PublicNext
28/09/2022 06:28 pm