ಶಿವಮೊಗ್ಗ: ನಾಡಹಬ್ಬ ದಸರಾ ಹಬ್ಬ ಆಚರಣೆ ಹಿನ್ನೆಲೆಯಲ್ಲಿ, ರಾಷ್ಟ್ರೀಯ ಸ್ವಯಂ ಸೇವಕ ಕಾರ್ಯಕರ್ತರು ಶಿವಮೊಗ್ಗದಲ್ಲಿ ಪಥಸಂಚಲನ ನಡೆಸಿದ್ದಾರೆ. ನಗರದ ಬಿ.ಹೆಚ್.ರಸ್ತೆಯ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಿಂದ ಪಥ ಸಂಚಲನ ಆರಂಭಿಸಲಾಯಿತು. ಬಳಿಕ ಈ ಪಥಸಂಚಲನ ನಗರದ ಹಲವು ಪ್ರಮುಖ ರಸ್ತೆಯಲ್ಲಿ ಸಾಗಿತು. ಸುಮಾರು 3 ಕಿ.ಮೀ. ವ್ಯಾಪ್ತಿಯಲ್ಲಿ ನಡೆಸಲಾದ ಈ ಪಥ ಸಂಕಲನದಲ್ಲಿ, ನೂರಾರು ಮಂದಿ ಸ್ವಯಂ ಸೇವಕರು ಭಾಗಿಯಾಗಿದ್ದರು. ಲಾಠಿ ಹಿಡಿದ ಗಣವೇಷಧಾರಿಗಳು ರೂಟ್ ಮಾರ್ಚ್ ನಡೆಸಿ, ಆರ್.ಎಸ್.ಎಸ್. ನ ಮಹತ್ವ ಸಾರಿದರು. ಈ ವೇಳೆ ನಗರದೆಲ್ಲೆಡೆ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು. ಪ್ರಮುಖ ಇಕ್ಕೆಲಗಳಲ್ಲಿ ಪೊಲೀಸ್ ಪಹರೆ ಹಾಕಲಾಗಿತ್ತು.
PublicNext
02/10/2022 08:46 pm