ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿವಮೊಗ್ಗ: 'ಭಾರತ್ ಜೋಡೋ ಯಾತ್ರೆಗೆ ಶಿವಮೊಗ್ಗದಿಂದಲೂ 50 ಬಸ್ ಜನ ಕಾರ್ಯಕರ್ತರು ಭಾಗಿ'

ಶಿವಮೊಗ್ಗ: ಎಐಸಿಸಿ ಮಾಜಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಸಾರಥ್ಯದಲ್ಲಿ ನಡೆಯುತ್ತಿರುವ ಭಾರತ ಐಕ್ಯದ ಯಾತ್ರೆಯು ಕರ್ನಾಟಕದಲ್ಲಿ ಹಾದು ಹೋಗುವ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲೆಯಿಂದಲೂ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಪಾದಯಾತ್ರೆಯಲ್ಲಿ ಭಾಗವಹಿಸುವ ಮೂಲಕ ಐಕ್ಯತೆ ಯಾತ್ರೆಯನ್ನು ಯಶಸ್ವಿಗೊಳಿಸಬೇಕು ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಚ್.ಎಸ್. ಸುಂದರೇಶ್ ತಿಳಿಸಿದ್ದಾರೆ.

ಇಂದು ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು, ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಸಧೃಡಗೊಳಿಸುವ ಉದ್ದೇಶದಿಂದ ರಾಹುಲ್ ಗಾಂಧಿ ಅವರ ಸಾರಥ್ಯದಲ್ಲಿ ಭಾರತ ಐಕ್ಯತಾ ಯಾತ್ರೆಯನ್ನು ನಡೆಸಲಾಗುತ್ತಿದೆ. ಈಗಾಗಲೇ ಯಾತ್ರೆಗೆ ಅಭೂತಪೂರ್ವ ಯಶಸ್ಸು ದೊರಕಿದೆ. ರಾಜ್ಯದಲ್ಲೂ ಐಕ್ಯತಾ ಯಾತ್ರೆಗೆ ನಿರೀಕ್ಷೆಗೆ ಮೀರಿದ ಯಶಸ್ಸು ದೊರಕುತ್ತಿದೆ. ಶಿವಮೊಗ್ಗ ಜಿಲ್ಲೆಯಿಂದಲೂ ಹೆಚ್ಚಿನ ಸಂಖ್ಯೆಯಲ್ಲಿ ಪಾದಯಾತ್ರೆಯಲ್ಲಿ ಭಾಗವಹಿಸಲು ತಿಳಿಸಲಾಗಿದೆ. ಅದರಂತೆ ಶಿವಮೊಗ್ಗ ಜಿಲ್ಲೆಯಲ್ಲಿರುವ ಏಳು ವಿಧಾನಸಭಾ ಕ್ಷೇತ್ರಗಳ ಕಾಂಗ್ರೆಸ್ ಕಾರ್ಯಕರ್ತರು ಭಾಗಿಯಾಗಲಿದ್ದಾರೆ ಎಂದು ತಿಳಿಸಿದ್ದಾರೆ.

ಶಿವಮೊಗ್ಗ ನಗರದಿಂದ 5 ಸಾವಿರ ಜನ ಪಾದಯಾತ್ರೆಯಲ್ಲಿ ಭಾಗಿಯಾಗಲಿದ್ದಾರೆ. ಈಗಾಗಲೇ 50 ಬಸ್‌ನಲ್ಲಿ ತೆರಳಲು ಬಸ್ ಸಹ ಬುಕ್ ಆಗಿದೆ. 7 ವಿಧಾನ ಸಭೆ ಕ್ಷೇತ್ರದಿಂದ 35 ಸಾವಿರ ಜನ ಪಾದಯಾತ್ರೆಯಲ್ಲಿ ಭಾಗಿಯಾಗಲಿದ್ದಾರೆ. ಪಕ್ಷದ ನಾಯಕರ ರಾಹುಲ್ ಗಾಂಧಿಯವರು ಕೈಗೊಂಡಿರುವ ಪಾದಯಾತ್ರೆಯಿಂದಾಗಿ ಬಿಜೆಪಿಗೆ ನಡುಕ ಹುಟ್ಟಿಸಿದೆ. ಕಾಂಗ್ರೆಸ್‌ಗೆ ದೊರಕುತ್ತಿರುವ ಜನಬೆಂಬಲ ಕಂಡು ಬಿಜೆಪಿ ಅವರಿಗೆ ಸಹಿಸದಂತಾಗಿದೆ. ಈ ಕಾರಣಕ್ಕಾಗಿ ಬಿಜೆಪಿ ನಾಯಕರು ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ ಎಂದು ಸುಂದರೇಶ್ ದೂರಿದ್ದಾರೆ.

Edited By :
PublicNext

PublicNext

07/10/2022 07:14 pm

Cinque Terre

28.4 K

Cinque Terre

1

ಸಂಬಂಧಿತ ಸುದ್ದಿ