ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿವಮೊಗ್ಗ : ಅದ್ಧೂರಿ ನವರಾತ್ರಿ : ಪದ್ಮಶ್ರೀ ಪುರಸ್ಕೃತೆ ತುಳಸಿಗೌಡ ಅವರಿಂದ ಉದ್ಘಾಟನೆ

ಶಿವಮೊಗ್ಗ : ಶಿವಮೊಗ್ಗ ಮಹಾನಗರ ಪಾಲಿಕೆಯು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಕಾರದೊಂದಿಗೆ ಸೆ. 26 ರಿಂದ ಅ.5 ರವರೆಗೆ ನಮ್ಮೂರ ನಾಡಹಬ್ಬ ಶಿವಮೊಗ್ಗ ದಸರಾ-2022ನ್ನು ಆಯೋಜಿಸಲಾಗಿದ್ದು, 10 ದಿನಗಳ ಕಾಲ ಅದ್ದೂರಿ ದಸರಾ ಆಚರಿಸಲಾಗುವುದು ಎಂದು ಮಹಾನಗರ ಪಾಲಿಕೆ ಮಹಾಪೌರರಾದ ಸುನೀತಾ ಅಣ್ಣಪ್ಪ ತಿಳಿಸಿದ್ದಾರೆ.

ಇಂದು ಮಹಾನಗರ ಪಾಲಿಕೆ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸೆ.26 ರ ಬೆಳಿಗ್ಗೆ 11 ಗಂಟೆಗೆ ಕೋಟೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜಾನಪದ ಕಲಾವಿದೆ, ಪರಿಸರ ಪ್ರೇಮಿ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ತುಳಸಿಗೌಡ ದಸರಾ ಉದ್ಘಾಟನೆ ನೆರವೇರಿಸಲಿದ್ದಾರೆ. ಶ್ರೀ ಚಾಮುಂಡೇಶ್ವರಿ ದೇವಿಯ ಉತ್ಸವ ಮೂರ್ತಿಯನ್ನು ಇದೇ ಸಂದರ್ಭದಲ್ಲಿ ಪ್ರತಿಷ್ಠಾಪಿಸಲಾಗುವುದು ಎಂದರು.

ಶಿವಮೊಗ್ಗ ದಸರಾಕ್ಕೆ ಹಲವು ವಿಶೇಷತೆಗಳಿವೆ. ಮೈಸೂರು ಹೊರತುಪಡಿಸಿದರೆ ಶಿವಮೊಗ್ಗದಲ್ಲಿ ಅತಿ ವಿಜೃಂಭಣೆಯಿಂದ ದಸರಾ ಆಚರಿಸಲಾಗುತ್ತಿದೆ. ಮಹಿಳಾ ದಸರಾ, ದಸರಾ ಚಲನಚಿತ್ರ್ಯೋತ್ಸವ, ಸಾಂಸ್ಕೃತಿಕ ದಸರಾ -ರಂಗ ದಸರಾ, ಯುವ ದಸರಾ, ಯಕ್ಷ ದಸರಾ, ಪರಿಸರ ದಸರಾ, ರೈತ ದಸರಾ, ಕಲಾ ದಸರಾ, ಯೋಗ ದಸರಾ, ಆಹಾರ ದಸರಾ ಎಂದು ನಾಡ ಹಬ್ಬವನ್ನು ವಿವಿಧ ಆಯಾಮಗಳಲ್ಲಿ ಆಚರಿಸಲಾಗುವುದು ಎಂದಿದ್ದಾರೆ.

ಮಹಿಳಾ ದಸರಾ:ಸೆ. 26 ರ ಸಂಜೆ 6 ಗಂಟೆಗೆ ಫ್ರೀಡಂ ಪಾರ್ಕ್ ನಲ್ಲಿ ಮಹಿಳಾ ದಸರಾವನ್ನು ವಿವಿಧ ಕ್ಷೇತ್ರದಲ್ಲಿ ಸಾಧನೆಗೈಧ ನಮ್ಮೂರ ಮಹಿಳಾ ಸಾಧಕಿಯರು ಉದ್ಘಾಟಿಸಲಿದ್ದು,ಮುಖ್ಯ ಅತಿಥಿಯಾಗಿ ಜಯಲಕ್ಷ್ಮೀ ಕೆ.ಎಸ್. ಈಶ್ವರಪ್ಪ, ಪ್ರತಿಭಾ ಡಿ.ಎಸ್. ಅರುಣ್, ಮೇಯರ್ ಸುನೀತಾ ಅಣ್ಣಪ್ಪ, ಉಪಮೇಯರ್, ಕೆ.ಶಂಕರ್ ಗನ್ನಿ ಆಗಮಿಸಲಿದ್ದು, ಅಧ್ಯಕ್ಷತೆಯನ್ನು ಮಹಿಳಾ ದಸರಾ ಸಮಿತಿ ಅಧ್ಯಕ್ಷೆ ರೇಖಾ ರಂಗನಾಥ್ ಅಧ್ಯಕ್ಷತೆ ವಹಿಸಲಿದ್ದಾರೆ.

ಸಭಾ ಕಾರ್ಯಕ್ರಮದ ನಂತರ ಅಮ್ಮ-ಮಗಳ ಸಂಪ್ರದಾಯಕ ಉಡುಗೆಗಳ ಸ್ಪರ್ಧೆ ನಡೆಯಲಿದೆ. ನಂತರ ಶಿವಮೊಗ್ಗ ನಗರದ ವಿವಿಧ ಮಹಿಳಾ ಸಂಘಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಹಾಗೂ ಸೆ. 27 ರ ಸಂಜೆ 4 ಗಂಟೆಗೆ ಗೋಪಿ ವೃತ್ತದಿಂದ ಫ್ರೀಡಂ ಪಾರ್ಕ್ವರೆಗೆ ಮಹಿಳಾ ಸ್ವಾತಂತ್ರ್ಯ ನಡಿಗೆ ನಡೆಯಲಿದೆ. 5ಗಂಟೆಗೆ ನಡೆಯುವ ಸಾಂಸ್ಕøತಿಕ ಕಾರ್ಯಕ್ರಮವನ್ನು ಕಿರುತೆರೆ ನಟಿಯರಾದ ನಯನ ಪಣಯಂ, ಅಶ್ವಿನಿ ಸಾಗರ್ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಯಾಗಿ ತೇಜಸ್ವಿನಿ ರಾಘವೇಂದ್ರ ಆಗಮಿಸಲಿದ್ದಾರೆ. ನಂತರ ವಿವಿಧ ಮಹಿಳಾ ಸಂಘಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದರು.

Edited By : Nagesh Gaonkar
PublicNext

PublicNext

24/09/2022 11:07 pm

Cinque Terre

35.37 K

Cinque Terre

0

ಸಂಬಂಧಿತ ಸುದ್ದಿ