ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

IND vs NZ; 2nd Test: ಶ್ರೇಯಸ್ ಅಯ್ಯರ್‌ನಿಂದ ಅದ್ಭುತ ಕ್ಯಾಚ್- ವಿಡಿಯೋ ವೈರಲ್

ಮುಂಬೈ: ನ್ಯೂಜಿಲೆಂಡ್ ವಿರುದ್ಧದ ಎರಡನೇ ಟೆಸ್ಟ್‌ ಪಂದ್ಯದಲ್ಲಿ ಟೀಂ ಇಂಡಿಯಾದ ಬ್ಯಾಟರ್ ಶ್ರೇಯಸ್ ಅಯ್ಯರ್ ಅದ್ಭುತ ಕ್ಯಾಚ್‌ ಹಿಡಿದಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಅಕ್ಷರ್ ಪಟೇಲ್ ಎಸೆತದಲ್ಲಿ ಕೈಲ್ ಜೇಮಿಸನ್ ಭರ್ಜರಿ ಹೊಡೆತಕ್ಕೆ ಮುಂದಾದರು. ಆದರೆ ಬ್ಯಾಟ್​ ಬದಿಗೆ ತಗುಲಿದ ಚೆಂಡು ವಿಕೆಟ್ ಕೀಪರ್​ನತ್ತ ಮುನ್ನುಗ್ಗಿತು. ಆದರೆ ವಿಕೆಟ್ ಕೀಪರ್ ಸಾಹ ಚೆಂಡನ್ನು ಗುರುತಿಸುವಲ್ಲಿ ಎಡವಿದರು. ಚೆಂಡು ಸಾಹ ಕಾಲಿಗೆ ತಗುಲಿ ಚಿಮ್ಮಿತು. ಅತ್ತ ಸಿಲ್ಲಿ ಪಾಯಿಂಟ್​ನಲ್ಲಿ ಫೀಲ್ಡಿಂಗ್​ನಲ್ಲಿದ್ದ ಶ್ರೇಯಸ್ ಅಯ್ಯರ್ ಕ್ಷಣಾರ್ಧದಲ್ಲೇ ಚೆಂಡನ್ನು ಗುರುತಿಸಿ ಅದ್ಭುತವಾಗಿ ಡೈವ್ ಹೊಡೆದು ಕ್ಯಾಚ್ ಹಿಡಿಯುವ ಮೂಲಕ ಜೇಮಿಸನ್ ಔಟ್ ಆಗಲು ಪ್ರಮುಖ ಕಾರಣರಾದರು. ಅದರಂತೆ ನ್ಯೂಜಿಲೆಂಡ್ ತಂಡವು ಕೇವಲ 62 ರನ್​ಗಳಿಗೆ ಇನಿಂಗ್ಸ್​ ಅಂತ್ಯಗೊಳಿಸುವಂತಾಯಿತು.

ಭಾರತ-ನ್ಯೂಜಿಲೆಂಡ್ ನಡುವಣ 2ನೇ ಟೆಸ್ಟ್​ ಪಂದ್ಯದಲ್ಲಿ ಭಾರತ ತಂಡವು ಭರ್ಜರಿ ಬೌಲಿಂಗ್​ ಪ್ರದರ್ಶನ ನೀಡಿದೆ. ಮೊದಲ ಇನಿಂಗ್ಸ್​ನಲ್ಲಿ 325 ರನ್​ಗಳಿಗೆ ಆಲೌಟ್ ಆಗಿದ್ದ ಭಾರತ ತಂಡವು ನ್ಯೂಜಿಲೆಂಡ್ ತಂಡವನ್ನು ಕೇವಲ 62 ರನ್​ಗಳಿಗೆ ಕಟ್ಟಿಹಾಕಿರುವುದು ವಿಶೇಷ. ಟೀಂ ಇಂಡಿಯಾ ಪರ ರವಿಚಂದ್ರನ್ ಅಶ್ವಿನ್ 4 ವಿಕೆಟ್ ಪಡೆದರೆ, ಮೊಹಮ್ಮದ್ ಸಿರಾಜ್ 3 ವಿಕೆಟ್ ಉರುಳಿಸಿದ್ದರು. ಇನ್ನು ಅಕ್ಷರ್ ಪಟೇಲ್ 2 ಹಾಗೂ ಜಯಂತ್ ಯಾದವ್ 1 ವಿಕೆಟ್ ಪಡೆದರು.

Edited By : Vijay Kumar
PublicNext

PublicNext

05/12/2021 07:38 am

Cinque Terre

45.5 K

Cinque Terre

0

ಸಂಬಂಧಿತ ಸುದ್ದಿ