ಇಂದು ದುಬೈನಲ್ಲಿ ನಡೆಯುವ ಐಪಿಎಲ್ ನ ಪಂದ್ಯದಲ್ಲಿ ಡೇವಿಡ್ ವಾರ್ನರ್ ನಾಯಕತ್ವದ ಸನ್ ರೈಸರ್ಸ್ ಹೈದರಾಬಾದ್ ಹಾಗೂ ಕೆಎಲ್ ರಾಹುಲ್ ನಾಯಕತ್ವದ ಕಿಂಗ್ಸ್ ಇಲೆವೆನ್ ಪಂಜಾಬ್ ಸೆಣಸಾಡಲಿವೆ.
ಡೇವಿಡ್ ವಾರ್ನರ್ ನಾಯಕತ್ವದ ಸನ್ ರೈಸರ್ಸ್ ಹೈದರಾಬಾದ್ ತಂಡ 5 ಪಂದ್ಯದಲ್ಲಿ 2 ಪಂದ್ಯ ಗೆದ್ದು 3 ಪಂದ್ಯಗಳಲ್ಲಿ ಸೋಲು ಕಂಡಿದ್ದು, 4 ಪಾಯಿಂಟ್ ಪಡೆದು (-0.417) ನೆಟ್ ರನ್ ರೇಟ್ ಮೂಲಕ ಅಂಕಪಟ್ಟಿಯಲ್ಲಿ 6ನೇ ಸ್ಥಾನ ಪಡೆದಿದೆ.
ಕೆಎಲ್ ರಾಹುಲ್ ನಾಯಕತ್ವದ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ ಸತತವಾಗಿ ಸೋಲನುಭವಿಸಿದ್ದು, ಇದರಿಂದ ಹೊರಬರುವುದನ್ನು ನೋಡುತ್ತಿದ್ದಾರೆ.
ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ 5 ಪಂದ್ಯಗಳಲ್ಲಿ ಕೇವಲ 1 ಪಂದ್ಯದಲ್ಲಿ ಜಯಗಳಿಸುವ ಮೂಲಕ 2 ಪಾಯಿಂಟ್ ಗಳಿಸಿ (+0.178) ನೆಟ್ ರನ್ ರೇಟ್ ನಿಂದ ಅಂಕಪಟ್ಟಿಯಲ್ಲಿ 8 ನೇ ಸ್ಥಾನದಲ್ಲಿದ್ದು, ಇಂದು ಎರಡು ತಂಡಗಳ ನಡುವೆ ರೋಚಕ ಪಂದ್ಯ ನಡೆಯಲಿದೆ.
PublicNext
08/10/2020 12:57 pm