ಶಾರ್ಜಾ: ಬ್ಯಾಟಿಂಗ್ ವೈಫಲ್ಯದ ಪರಿಣಾಮ ರಾಜಸ್ಥಾನ್ ರಾಯಲ್ಸ್ ತಂಡ ನಿರಂತರ 4ನೇ ಸೋಲು ಕಂಡಿದೆ. ಈ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ ತಂಡ 46 ರನ್‌ಗಳ ಭರ್ಜರಿ ಜಯ ಸಾಧಿಸಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೆ ಏರಿದೆ.'
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಡೆಲ್ಲಿ ತಂಡ ಪ್ರಮುಖ ಬ್ಯಾಟ್ಸ್‌ಮನ್‌ಗಳ ವೈಫಲ್ಯದ ನಡುವೆಯೂ 8 ವಿಕೆಟ್ ನಷ್ಟಕ್ಕೆ 185 ರನ್‌ಗಳ ಸವಾಲಿನ ಮೊತ್ತ ಗುರಿ ನೀಡಿತ್ತು. ಡೆಲ್ಲಿ ಪರ ಹೆಟ್ಮೆಯರ್ 45 ರನ್(24 ಎಸೆತ, 1 ಬೌಂಡರಿ, 5 ಸಿಕ್ಸರ್) ಸ್ಟೋಯಿನಸ್ 39 ರನ್ (30 ಎಸೆತ, 4 ಸಿಕ್ಸರ್) ಚಚ್ಚಿದರು. ಇದಕ್ಕೂ ಮುನ್ನ ಆರಂಭಿಕ ಪೃಥ್ವಿ ಶಾ (19), ಶಿಖರ್ ಧವನ್ (5) ಬೇಗನೆ ವಿಕೆಟ್ ಒಪ್ಪಿಸಿದರು. ಅದೇರೀತಿ ನಾಯಕ ಶ್ರೇಯಸ್ ಅಯ್ಯರ್ (22) ಮತ್ತು ರಿಷಭ್ ಪಂತ್ (5) ಇಲ್ಲದ ರನ್ ಕದಿಯಲು ಹೋಗಿ ರನೌಟ್ ಆದರು.
ಡೆಲ್ಲಿ ಕ್ಯಾಪಿಟಲ್ಸ್ ನೀಡಿದ 185 ರನ್‌ಗಳ ಗುರಿ ಬೆನ್ನತ್ತಲು ವಿಫಲವಾದ ರಾಜಸ್ಥಾನ ರಾಯಲ್ಸ್ ಕೇವಲ 138 ರನ್ ಗಳಿಸಿ ಆಲೌಟ್ ಆಯಿತು. ಇದರೊಂದಿಗೆ 46 ರನ್‌ಗಳ ಗೆಲುವು ಸಾಧಿಸಿದ ಡೆಲ್ಲಿ ತಂಡ ಇದುವರೆಗೆ ಆಡಿರುವ 6 ಪಂದ್ಯಗಳಲ್ಲಿ 5ನೇ ಜಯ ದಾಖಲಿಸಿ ಪಾಯಿಂಟ್ಸ್ ಪಟ್ಟಿಯಲ್ಲಿ ಮೇಲೇರಿತು.
PublicNext
10/10/2020 07:41 am