ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಡಿ ಕಾಕ್, ಸೂರ್ಯಕುಮಾರ್ ಅರ್ಧಶತಕದ ಅಬ್ಬರಕ್ಕೆ ಅಯ್ಯರ್ ಪಡೆ ತತ್ತರ: 5 ವಿಕೆಟ್‌ಗಳಿಂದ ಮುಂಬೈಗೆ ಗೆಲುವು

ಅಬುಧಾಬಿ: ಕ್ವಿಂಟನ್ ಡಿ ಕಾಕ್ ಹಾಗೂ ಸೂರ್ಯಕುಮಾರ್ ಯಾದವ್ ಭರ್ಜರಿ ಬ್ಯಾಟಿಂಗ್ ನಿಂದ ಮುಂಬೈ ಇಂಡಿಯನ್ಸ್ ತಂಡವು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 5 ವಿಕೆಟ್‌ಗಳಿಂದ ಗೆದ್ದು ಬೀಗಿದೆ.

ಅಬುಧಾಬಿಯ ಶೇಖ್ ಝಾಯೆದ್ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ 27ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮುಂಬೈ ಇಂಡಿಯನ್ಸ್​ಗೆ ಗೆಲ್ಲಲು 163 ರನ್​ಗಳ ಟಾರ್ಗೆಟ್ ನೀಡಿತ್ತು. ಸವಾಲು ಬೆನ್ನತ್ತಿದ ಮುಂಬೈ ಇಂಡಿಯನ್ಸ್​ಗೆ ರೋಹಿತ್ ಶರ್ಮಾ ಹಾಗೂ ಕ್ವಿಂಟನ್ ಡಿ ಕಾಕ್ ಉತ್ತಮ ಆರಂಭ ಒದಗಿಸಿದ್ದರು. ಆದರೆ 5ನೇ ಓವರ್​ ಕೊನೆಯ ಎಸೆತದಲ್ಲಿ ಸಿಕ್ಸರ್ ಬಾರಿಸಲು ಯತ್ನಿಸಿದ ರೋಹಿತ್ ಶರ್ಮಾ (5) ಬೌಂಡರಿ ಲೈನ್​ನಲ್ಲಿ ಕ್ಯಾಚ್ ನೀಡಿ ಪೆವಿಲಿಯನ್‌ಗೆ ತೆರಳಿದರು.

ಮುಂಬೈ ಪರ ಕ್ವಿಂಟನ್ ಡಿಕಾಕ್ 53 ರನ್ (36 ಎಸೆತ, 4 ಬೌಂಡರಿ, 3 ಸಿಕ್ಸರ್) ಹಾಗೂ ಸೂರ್ಯಕುಮಾರ್ ಯಾದವ್ 53 ರನ್ (32 ಎಸೆತ, 6 ಬೌಂಡರಿ, 1 ಸಿಕ್ಸ್‌) ಸಹಾಯದಿಂದ ಮುಂಬೈ ತಂಡವು 19.4 ಓವರಿನಲ್ಲಿ 5 ವಿಕೆಟ್ ನಷ್ಟಕ್ಕೆ 166 ರನ್ ಗಳಿಸಿ ಗೆಲುವು ದಾಖಲಿಸಿತು.

ಇದಕ್ಕೂ ಮುನ್ನ ಬ್ಯಾಟಿಂಗ್ ಮಾಡಿದ್ದ ಡೆಲ್ಲಿ ತಂಡವು ಡೆಲ್ಲಿ ಕ್ಯಾಪಿಟಲ್ಸ್ 4 ವಿಕೆಟ್ ನಷ್ಟಕ್ಕೆ 162 ರನ್ ಪೇರಿಸಿತ್ತು. ಡೆಲ್ಲಿ ಪರ ಶಿಖರ್ ಧವನ್ ಅಜೇಯ 69 ರನ್ (52 ಎಸೆತ, 6 ಬೌಂಡರಿ, 1 ಸಿಕ್ಸ್) ಹಾಗೂ ಶ್ರೇಯಸ್ ಅಯ್ಯರ್ 42 ರನ್ (33 ಎಸೆತ, 5 ಬೌಂಡರಿ) ಚಚ್ಚಿದ್ದರು.

Edited By : Vijay Kumar
PublicNext

PublicNext

11/10/2020 11:28 pm

Cinque Terre

86.39 K

Cinque Terre

19