ಶರ್ಜಾ: ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ನಾಯಕ ವಿರಾಟ್ ಕೊಹ್ಲಿ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.
ಎರಡೂ ತಂಡಗಳಲ್ಲಿ ಸ್ವಲ್ಪ ಬದಲಾವಣೆ ಮಾಡಲಾಗಿದೆ. ಕೆಕೆಆರ್‌ನಲ್ಲಿ ನಿಯಮಬಾಹಿರ ಬೌಲಿಂಗ್ ಶೈಲಿಯ ಆರೋಪಕ್ಕೊಳಗಾಗಿರುವ ಸುನೀಲ್ ನರೇನ್ ಅವರನ್ನು ಕೈಬಿಟ್ಟು ಟಾಮ್ ಬ್ಯಾಂಟನ್‌ಗೆ ಅವಕಾಶ ನೀಡಲಾಗಿದೆ. ಇತ್ತ ಆರ್‌ಸಿಬಿಯಲ್ಲಿ ಗುರುಕೀರತ್ ಸಿಂಗ್ ಮಾನ್ ಬದಲು ಮೊಹಮ್ಮದ್ ಸಿರಾಜ್ ಅವರನ್ನು ಕಣಕ್ಕಿಳಸಲಾಗಿದೆ.
ಆರ್‌ಸಿಬಿ: ದೇವದತ್ತ ಪಡಿಕ್ಕಲ್, ಆ್ಯರನ್ ಫಿಂಚ್, ವಿರಾಟ್ ಕೊಹ್ಲಿ (ನಾಯಕ), ಎಬಿ ಡಿ ವಿಲಿಯರ್ಸ್ (ವಿಕೆಟ್ ಕೀಪರ್), ಮೊಹಮ್ಮದ್ ಸಿರಾಜ್, ಶಿವಂ ದುಬೆ, ಕ್ರಿಸ್ ಮೋರಿಸ್, ವಾಷಿಂಗ್ಟನ್ ಸುಂದರ್, ಇಸುರು ಉದಾನ, ನವದೀಪ್ ಸೈನಿ, ಯಜುವೇಂದ್ರ ಚಾಹಲ್
ರೈಡರ್ಸ್: ಶುಭಮನ್ ಗಿಲ್, ರಾಹುಲ್ ತ್ರಿಪಾಠಿ, ನಿತೀಶ್ ರಾಣಾ, ಆ್ಯಂಡ್ರೆ ರಸೇಲ್, ಟಾಮ್ ಬ್ಯಾಂಟನ್, ದಿನೇಶ್ ಕಾರ್ತಿಕ್ (ನಾಯಕ/ವಿಕೆಟ್ ಕೀಪರ್), ಎಯಾನ್ ಮಾರ್ಗನ್, ಪ್ಯಾಟ್ ಕಮಿನ್ಸ್, ಕಮಲೇಶ್ ನಾಗರಕೋಟಿ, ಶಿವಂ ಮಾವಿ, ವರುಣ್ ಚಕ್ರವರ್ತಿ
PublicNext
12/10/2020 07:32 pm