ದುಬೈ : 2020ರ ಐಪಿಎಲ್ ನ 29ನೇ ಪಂದ್ಯದಲ್ಲಿ ಡೇವಿಡ್ ವಾರ್ನರ್ ನಾಯಕತ್ವದ ಸನ್ ರೈಸರ್ಸ್ ಹೈದರಾಬಾದ್ ಹಾಗೂ ಎಂ ಎಸ್ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಸೆಣೆಸಾಡಲಿವೆ.
ದುಬೈ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯುತ್ತಿದ್ದು ಗೆಲ್ಲಲೇ ಬೇಕಾದ ಒತ್ತಡದಲ್ಲಿ ಉಭಯ ತಂಡಗಳಿರುವ ಕಾರಣ ಹೈವೋಲ್ಟೇಜ್ ಪಂದ್ಯ ಇದಾಗಿದೆ.
ಐಪಿಎಲ್ ನ ಮೂರು ಬಾರಿ ಚಾಂಪಿಯನ್ ಆಗಿದ್ದ ಸಿಎಸ್ ಕೆ ಈ ಬಾರಿ ಕಳಪೆ ಪ್ರದರ್ಶನ ತೋರುತ್ತಿದೆ. 7 ಪಂದ್ಯಗಳಲ್ಲಿ ಸೋಲು ಅನುಭವಿಸಿರುವ ಧೋನಿ ಪಡೆ ಪ್ಲೇ ಆಫ್ ಹಂತಕ್ಕೆ ತಲುಪಬೇಕಾದರೆ ಗೆಲುವೊಂದೇ ಮಾರ್ಗವಾಗಿದೆ.
ಇಂದಿನ ಹೈದರಾಬಾದ್ ವಿರುದ್ಧದ ಪಂದ್ಯದಲ್ಲೂ ಸೋತರೆ ಧೋನಿ ಬಳಗದ ಮುಂದಿನ ಹಾದಿ ಬಹುತೇಕ ಅಂತ್ಯವಾಗಲಿದೆ.
ಹೀಗಾಗಿ ಸಿಎಸ್ ಕೆಗೆ ಈ ಪಂದ್ಯ ಅಗ್ನಿಪರೀಕ್ಷೆಯಾಗಿದೆ.
ಇತ್ತ ಸನ್ ರೈಸರ್ಸ್ ಹೈದರಾಬಾದ್ ಗೆಲುವಿನ ಹಳಿಗೇರುವ ತವಕದಲ್ಲಿದೆ.
ಸದ್ಯ ಅಂಕಪಟ್ಟಿಯಲ್ಲಿ 5ನೇ ಸ್ಥಾನದಲ್ಲಿರುವ ವಾರ್ನರ್ ಪಡೆ, ಮುಂದಿನ ಪಂದ್ಯಗಳನ್ನು ಒತ್ತಡ ರಹಿತವಾಗಿ ಆಡುವ ದೃಷ್ಟಿಯಿಂದ ಗೆಲುವು ಅನಿವಾರ್ಯವಾಗಿದೆ.
ಉಭಯ ತಂಡಗಳು ಈವರೆಗೆ 13 ಪಂದ್ಯಗಳಲ್ಲಿ ಮುಖಾಮುಖಿ ಆಗಿವೆ. ಇದರಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡ 4 ಹಾಗೂ ಚೆನ್ನೈ ಸೂಪರ್ ಕಿಂಗ್ಸ್ 9 ಪಂದ್ಯಗಳಲ್ಲಿ ಗೆಲುವು ಕಂಡ ಇತಿಹಾಸವಿದೆ.
PublicNext
13/10/2020 02:51 pm