ಶಾರ್ಜಾ: ಶಾರ್ಜಾ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಐಪಿಎಲ್ನ 31ನೇ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಕಿಂಗ್ಸ್ ಇಲೆವೆನ್ ಪಂಜಾಬ್್ಗೆ 172 ರನ್‌ಗಳ ಗುರಿ ನೀಡಿದೆ.
ಟಾಸ್ ಗೆದ್ದು ಬ್ಯಾಟಿಂಗ್ಗೆ ಇಳಿದ ಆರ್‌ಸಿಬಿ ಸ್ಫೋಟಕ ಆರಂಭ ಪಡೆದುಕೊಂಡಿತು. ತಂಡ ಪರ ಆರಂಭಿಕ ಬ್ಯಾಟ್ಸ್‌ಮನ್ ಆ್ಯರೋನ್ ಫಿಂಚ್ ಹಾಗೂ ದೇವದತ್ ಪಡಿಕ್ಕಲ್ ಮೊದಲ 4 ಓವರ್‌ಗಳಲ್ಲಿ 38 ರನ್ ಚಚ್ಚಿದರು. ಆದರೆ 5ನೇ ಓವರ್ನ ಮೊದಲ ಎಸೆತದಲ್ಲೇ 12 ಎಸೆತಗಳಲ್ಲಿ 18 ರನ್ ಬಾರಿಸಿದ್ದ ಪಡಿಕ್ಕಲ್ ಔಟ್ ಆದರು. ಈ ಬೆನ್ನಲ್ಲೇ 16 ರನ್ ಫಿಂಚ್ ವಿಕೆಟ್ ಒಪ್ಪಿಸಿ ಪೆವಿಲಿಯನ್ ಸೇರಿದರು.
ಈ ವೇಳೆ ನಾಯಕ ವಿರಾಟ್ ಕೊಹ್ಲಿಗೆ ಸಾಥ್ ನೀಡಲು ವಿಫಲವಾದ ವಾಷಿಂಗ್ಟನ್ ಸುಂದರ್ 13 ರನ್‌ಗೆ ವಿಕೆಟ್ ಕಳೆದುಕೊಂಡರು. ಬಳಿಕ ಬಂದ ಶಿವಂ ದುಬೆ ನಾಯಕನಿಗೆ ಸಾಥ್ ನೀಡಿದರು. ಈ ಜೋಡಿ 4ನೇ ವಿಕೆಟ್ ನಷ್ಟಕ್ಕೆ 41 ರನ್ ಚಚ್ಚಿದರು. ಶಿವಂ ದುಬೈ (23 ರನ್) ವಿಕೆಟ್ ಬಳಿಕ ಮೈದಾನಕ್ಕಿಳಿಸ ಎಬಿ ಡಿವಿಲಿಯರ್ಸ್ (2 ರನ್) ಬಹುಬೇಗ ವಿಕೆಟ್ ಕಳೆದುಕೊಂಡರು. ಈ ಬೆನ್ನಲ್ಲೇ 48 ರನ್ ಚಚ್ಚಿದ ನಾಯಕ ವಿರಾಟ್ ವಿಕೆಟ್ ಒಪ್ಪಿಸಿದರು. ಕೊನೆಯಲ್ಲಿ ಕ್ರಿಸ್ ಮೊರೀಸ್ 25 ರನ್ (8 ಎಸೆತ) ಹಾಗೂ ಇಸುರು ಉದಾನ 10 ರನ್ ಬಾರಿಸಿದರು. ಇದರಿಂದಾಗಿ ಆರ್‌ಸಿಬಿ ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 171 ರನ್ ಗಳಿಸಿತು.
ಪಂಜಾಬ್ ತಂಡದ ಪರ ಮುರುಗನ್ ಅಶ್ವಿನ್, ಮೊಹಮ್ಮದ್ ಶಮಿ ಪ್ರಮುಖ 2 ವಿಕೆಟ್ ಪಡೆದು ಮಿಂಚಿದರೆ, ಅರ್ಷ್‌ದೀಪ್ ಸಿಂಗ್ ಹಾಗೂ ಕ್ರಿಸ್ ಜೋರ್ಡಾನ್ ತಲಾ ಒಂದು ವಿಕೆಟ್ ಕಿತ್ತರು.
PublicNext
15/10/2020 09:16 pm