ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೌಂಡರಿಗಿಂತ ಸಿಕ್ಸರ್‌ಗಳೇ ಹೆಚ್ಚು- ಗೇಲ್, ಕೆಎಲ್ ಅಬ್ಬರಕ್ಕೆ ಮಣಿದ ಆರ್‌ಸಿಬಿ

ಶಾರ್ಜಾ: ನಾಯಕ ಕೆ.ಎಲ್.ರಾಹುಲ್ ಹಾಗೂ ಕ್ರೀಸ್​ ಗೇಲ್ ಬ್ಯಾಟಿಂಗ್ ಅಬ್ಬರದಿಂದ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡವು ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ 8 ವಿಕೆಟ್‌ಗಳಿಂದ ಭರ್ಜರಿ ಗೆಲುವು ಸಾಧಿಸಿದೆ.

ಶಾರ್ಜಾ ಕ್ರಿಕೆಟ್ ಮೈದಾನದಲ್ಲಿ ನಡೆದ ಐಪಿಎಲ್​ನ 31ನೇ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿ ಆರ್‌ಸಿಬಿ 172 ರನ್‌ಗಳ ಗುರಿ ನೀಡಿತ್ತು. ಬೃಹತ್ ಮೊತ್ತದ ಗುರಿ ಬೆನ್ನಟ್ಟಿದ ಪಂಜಾಬ್ ಕೊನೆಯ ಎಸೆತದಲ್ಲಿ ಸಿಕ್ಸರ್ ಸಿಡಿಸುವ ಮೂಲಕ 2 ವಿಕೆಟ್‌ ನಷ್ಟಕ್ಕೆ 177 ರನ್ ಗಳಿಸಿ ಗೆದ್ದು ಬೀಗಿದೆ.

ಪಂಜಾಬ್ ಪರ ನಾಯಕ ಕೆ.ಎಲ್.ರಾಹುಲ್ ಅಜೇಯ 61 ರನ್ (49 ಎಸೆತ, 1 ಬೌಂಡರಿ, 5 ಸಿಕ್ಸರ್), ಕ್ರೀಸ್ ಗೇಲ್ 53 ರನ್ (45 ಎಸೆತ, 1 ಬೌಂಡರಿ, 5 ಸಿಕ್ಸರ್),ಮಯಾಂಕ್ ಅಗರ್ವಾಲ್ 45 ರನ್ (25 ಎಸೆತ, 4 ಬೌಂಡರಿ, 3 ಸಿಕ್ಸರ್) ಹಾಗೂ ನಿಕೋಲಸ್ ಪೂರನ್ ಅಜೇಯ 6 ರನ್ (1 ಎಸೆತ) ಚಚ್ಚಿದರು.

ಇದಕ್ಕೂ ಟಾಸ್ ಗೆದ್ದು ಬ್ಯಾಟಿಂಗ್ ಮಾಡಿದ್ದ ಆರ್‌ಸಿಬಿ ವಿರಾಟ್ ಕೊಹ್ಲಿ 48 ರನ್ ಸಹಾಯದಿಂದ ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 171 ರನ್‌ ಗಳಿಸಿತ್ತು.

Edited By : Vijay Kumar
PublicNext

PublicNext

15/10/2020 11:11 pm

Cinque Terre

81.33 K

Cinque Terre

13