ಅಬುಧಾಬಿ: ಐಪಿಎಲ್-13ನೇ ಆವೃತ್ತಿಯ ಭಾಗವಾಗಿ ಇಂದು 32ನೇ ಪಂದ್ಯವು ಮುಂಬೈ ಇಂಡಿಯನ್ಸ್ ಹಾಗೂ ಕೋಲ್ಕತಾ ನೈಟ್ ರೈಡರ್ಸ್ ನಡುವೆ ನಡೆಯಲಿದೆ.
ಶೇಖ್ ಜಾಯೆದ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದಿರುವ ಕೋಲ್ಕತ್ತಾ ನೈಟ್‌ರೈಡರ್ಸ್ ತಂಡದ ನಾಯಕ ಎಯಾನ್ ಮಾರ್ಗನ್ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.
ಅನುಭವಿ ವಿಕೆಟ್‌ಕೀಪರ್ ಬ್ಯಾಟ್ಸ್‌ಮನ್ ದಿನೇಶ್ ಕಾರ್ತಿಕ್ ಕೋಲ್ಕತ್ತಾ ನೈಟ್‌ರೈಡರ್ಸ್ ತಂಡದ ನಾಯಕತ್ವವನ್ನು ಸಹ ಆಟಗಾರ ಎಯಾನ್ ಮಾರ್ಗನ್ ಅವರಿಗೆ ಬಿಟ್ಟುಕೊಟ್ಟಿದ್ದಾರೆ. ಹೀಗಾಗಿ ಇಂದು ಮಾರ್ಗನ್ ತಂಡವನ್ನು ಮುನ್ನಡೆಸಲಿದ್ದಾರೆ.
PublicNext
16/10/2020 07:15 pm