ದುಬೈ: ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಇಂದು ಐಪಿಎಲ್‌ನ 33ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿವೆ.
ಶನಿವಾರ ಮಧ್ಯಾಹ್ನ 3:30ಕ್ಕೆ ನಡೆಯಲಿರುವ ಮೊದಲ ಪಂದ್ಯದಲ್ಲಿ ಯಾವ ತಂಡಕ್ಕೆ ಗೆಲುವು ಸಿಗಲಿದೆ ಎಂಬ ಕುತೂಹಲ ಶುರುವಾಗಿದೆ. ಎರಡೂ ತಂಡಗಳ ಅಂಕಿ ಅಂಶ ನೋಡುವುದಾದರೆ ಈವರೆಗೆ 21 ಬಾರಿ ಮುಖಾಮುಖಿಯಾಗಿದೆ. ಇದರಲ್ಲಿ ರಾಜಸ್ಥಾನ್ ರಾಯಲ್ಸ್ 10 ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದರೆ, ಆರ್‌ಸಿಬಿ 9 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಉಳಿದಂತೆ ಎರಡು ಪಂದ್ಯಗಳು ಮಳೆಯಿಂದಾಗಿ ರದ್ದಾಗಿವೆ.
ಐಪಿಎಲ್ 13ನೇ ಆವೃತ್ತಿಯ ಮೊದಲ ಸುತ್ತಿನಲ್ಲಿ ಮುಖಾಮುಖಿಯಾಗಿದ್ದಾಗ ವಿರಾಟ್ ಪಡೆಯು ರಾಜಸ್ಥಾನ್ ತಂಡವನ್ನು 8 ವಿಕೆಟ್‌ಗಳಿಂದ ಮಣಿಸಿತ್ತು. ಅಂಕಪಟ್ಟಿಯಲ್ಲಿ ಆರ್‌ಸಿಬಿ ಮೂರನೇ ಸ್ಥಾನದಲ್ಲಿದ್ದರೆ, ರಾಜಸ್ಥಾನ್ ತಂಡವು 7ನೇ ಸ್ಥಾನದಲ್ಲಿದೆ.
PublicNext
17/10/2020 12:31 pm