ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

2016 ರಲ್ಲಿಯ ಧೋನಿ ವಿರುದ್ಧ ಸೇಡು ತೀರಿಸಿಕೊಂಡ ಅಕ್ಷರ್ ಪಟೇಲ್

ಶಾರ್ಜಾ: ಚೆನ್ನೈ ವಿರುದ್ಧ ನಡೆದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಗೆ ಜಯವನ್ನು ತಂದಿಟ್ಟ ಅಕ್ಷರ್ ಪಟೇಲ್ ಮೂರು ಸಿಕ್ಸ್ ಸಿಡಿಸುವ ಮೂಲಕ ಧೋನಿ ವಿರುದ್ಧ ಸೇಡನ್ನು ತೀರಿಸಿಕೊಂಡಿದ್ದಾರೆ ಎಂಬ ಅಭಿಪ್ರಾಯ ನೆಟ್ಟಿಗರದ್ದು.

2016 ರ ಐಪಿಎಲ್ ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಐಪಿಎಲ್ ನಿಂದ ಅಮಾನತುಗೊಂಡಿದ್ದ ಹಿನ್ನೆಲೆಯಲ್ಲಿ ಧೋನಿ ರೈಸಿಂಗ್ ಪುಣೆ ಸೂಪರ್ ಜೈಂಟ್ಸ್ ತಂಡವನ್ನು ಮುನ್ನಡೆಸುತ್ತಿದ್ದರು.

ಈ ವೇಳೆ ಅಕ್ಷರ್ ಪಟೇಲ್ ಕಿಂಗ್ಸ್ ಇಲೆವನ್ ಪಂಜಾಬ್ ತಂಡದ ಪರ ಆಡುತ್ತಿದ್ದರು.

ವಿಶಾಖಪಟ್ಟಣದಲ್ಲಿ ಮೇ 21 ರಂದು ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಕಿಂಗ್ಸ್ ಇಲೆವನ್ ಪಂಜಾಬ್ ತಂಡ 7 ವಿಕೆಟ್ ನಷ್ಟಕ್ಕೆ 172 ರನ್ ಗಳಿಸಿತ್ತು.

173 ರನ್ ಗಳ ಗುರಿಯನ್ನು ಬೆನ್ನಟ್ಟಿದ್ದ ಪುಣೆ ತಂಡಕ್ಕೆ ಕೊನೆಯ ಓವರ್ನಲ್ಲಿ 23 ರನ್ ಗಳು ಬೇಕಿತ್ತು.

ಅಕ್ಷರ್ ಪಟೇಲ್ ಎಸೆದ ಈ ಓವರ್ ನಲ್ಲಿ 3 ಸಿಕ್ಸ್, ಒಂದು ಬೌಂಡರಿ ಹೊಡೆಯುವ ಮೂಲಕ ಧೋನಿ 23 ರನ್ ಚಚ್ಚಿದ್ದರು.

ಕೊನೆಯ ಎಸೆತವನ್ನು ಸಿಕ್ಸರ್ ಗೆ ಅಟ್ಟಿ ಪಂದ್ಯವನ್ನು ಗೆಲ್ಲಿಸಿಕೊಟ್ಟಿದ್ದರು.

ಧೋನಿ ಔಟಾಗದೇ 64 ರನ್(32 ಎಸೆತ, 4 ಬೌಂಡರಿ, 5 ಸಿಕ್ಸರ್) ಹೊಡೆದು ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ಪಡೆದುಕೊಂಡಿದ್ದರು.

ಅಂದು ಧೋನಿ 3 ಸಿಕ್ಸ್ ಹೊಡೆದಿದ್ದರೆ ಶನಿವಾರದ ಪಂದ್ಯದಲ್ಲಿ ಅಕ್ಷರ್ ಪಟೇಲ್ ಕೊನೆಯ ಓವರಿನಲ್ಲಿ 3 ಸಿಕ್ಸ್ ಹೊಡೆದು ತಮ್ಮ ಸೇಡು ತೀರಿಸಿಕೊಂಡಿದ್ದಾರೆ ಎಂದು ನೆಟ್ಟಿರು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

Edited By : Nirmala Aralikatti
PublicNext

PublicNext

18/10/2020 03:01 pm

Cinque Terre

37.52 K

Cinque Terre

1