ದುಬೈ: ಐಪಿಎಲ್ 13ನೇ ಆವೃತ್ತಿಯ 36ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಕಿಂಗ್ಸ್ ಇಲೆವೆನ್ ಪಂಜಾಬ್ ಮುಖಾಮುಖಿಯಾಗುತ್ತಿದ್ದು, ಟಾಸ್ ಗೆದ್ದ ರೋಹಿತ್ ಪಡೆ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.
ಪಂಜಾಬ್ ತಂಡ ಕ್ರಿಸ್ ಗೇಲ್ ಸೇರ್ಪಡೆಯಿಂದ ಬಲಿಷ್ಟವಾಗಿದ್ದು, ಇಂದು ಕೂಡ ಗೆಲ್ಲುವ ಉತ್ಸಾಹದಲ್ಲಿದೆ. ರಾಹುಲ್ ಬಳಗ ಟೂರ್ನಿಯಲ್ಲಿ ಉಳಿದುಕೊಳ್ಳಬೇಕಾದರೇ ಇಂದು ನಡೆಯುವ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡವನ್ನು ಮಣಿಸಲೇ ಬೇಕಾಗಿದೆ.
ಮತ್ತೊಂದೆಡೆ ರೋಹಿತ್ ಬಳಗ ಸತತ 5 ಗೆಲುವು ದಾಖಲಿಸಿ ಆತ್ಮವಿಶ್ವಾಸದ ಅಲೆಯಲ್ಲಿ ತೇಲುತ್ತಿದೆ. ಮಾತ್ರವಲ್ಲದೆ 12 ಪಾಯಿಂಟ್ಸ್ ಗಳೊಂದಿಗೆ ಅಂಕಪಟ್ಟಿಯಲ್ಲಿ 2ನೇ ಸ್ಥಾನ ಪಡೆದುಕೊಂಡಿದೆ.
ಆಡುವ ಹನ್ನೊಂದರ ಬಳಗ
ಕಿಂಗ್ಸ್ ಇಲೆವೆನ್ ಪಂಜಾಬ್: ಕೆ.ಎಲ್. ರಾಹುಲ್ (ನಾಯಕ), ಮಾಯಾಂಕ್ ಅಗರ್ವಾಲ್, ಕ್ರಿಸ್ ಗೇಲ್, ನಿಕೋಲಸ್ ಪೂರನ್, ಗ್ಲೆನ್ ಮ್ಯಾಕ್ಸ್ ವೆಲ್, ದೀಪಕ್ ಹೂಡಾ, ಕ್ರಿಸ್ ಜೋರ್ಡಾನ್, ಮುರುಗನ್ ಅಶ್ವಿನ್, ಮೊಹಮ್ಮದ್ ಶಮಿ, ರವಿ ಬಿಶ್ನೋಯ್, ಹರ್ಷ್‌ದೀಪ್ ಸಿಂಗ್
ಮುಂಬೈ ಇಂಡಿಯನ್ಸ್: ರೋಹಿತ್ ಶರ್ಮಾ (ನಾಯಕ), ಕ್ವಿಂಟನ್ ಡಿ ಕಾಕ್, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ಕೀರನ್ ಪೊಲಾರ್ಡ್, ಕ್ರುನಾಲ್ ಪಾಂಡ್ಯ, ನಾಥನ್ ಕೌಲ್ಟರ್-ನೈಲ್, ರಾಹುಲ್ ಚಹರ್, ಟ್ರೆಂಟ್ ಬೌಲ್ಟ್, ಜಸ್ಪ್ರೀತ್ ಬುಮ್ರಾ
PublicNext
18/10/2020 07:43 pm