ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸುಪರ್ ಓವರ್ ನಲ್ಲಿ ಗೆದ್ದು ಬೀಗಿದ ಕೆಕೆಆರ್

ಅಬುಧಾಬಿ: ಕೋಲ್ಕತಾ ನೈಟ್ ರೈಡರ್ಸ್ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ನಡುವಿನ ರೋಚಕ ಸೆಣೆಸಾಟದಲ್ಲಿ ಕೋಲ್ಕತಾ ತಂಡವು ಸೂಪರ್ ಓವರ್ ನಲ್ಲಿ ಗೆಲುವು ಸಾಧಿಸಿದೆ.

ಟಾಸ್ ಗೆದ್ದ ಸನ್‌ರೈಸರ್ಸ್ ಹೈದರಾಬಾದ್ ಬೌಲಿಂಗ್ ಆಯ್ಕೆ ಮಾಡಿಕೊಂಡಿತ್ತು. ಮೊದಲು ಬ್ಯಾಟಿಂಗ್ ಮಾಡಿದ ಕೆಕೆಆರ್ ನಿಗದಿತ 20 ಓವರ್ ಗಳಲ್ಲಿ 163 ರನ್ ಗಳಿಸಿತ್ತು.

ಗೆಲುವಿಗೆ 164 ರನ್ ಗಳ ಗುರಿ ಪಡೆದ ಹೈದರಾಬಾದ್ ನಿಗದಿತ 20 ಓವರ್ ಗಳಲ್ಲಿ 163 ರನ್ ಗಳಿಸಿ ಪಂದ್ಯವನ್ನು ಟೈ ಮಾಡಿಕೊಂಡಿತು. ಲುಕಿ ಫರ್ಗ್ಯೂಸನ್‌ ಕೇವಲ 15 ರನ್ ನೀಡಿದ 3 ವಿಕೆಟ್ ಕಬಳಿಸಿದರು.

ಬಳಿಕ ನಡೆದ ಸೂಪರ್ ಓವರ್ ನಲ್ಲಿ ಲುಕಿ ಫರ್ಗ್ಯೂಸನ್‌ ಮಾರಕ ದಾಳಿಗೆ ಹೈದರಾಬಾದ್ ಕೇವಲ 2 ರನ್ ಗಳಿಸಲಷ್ಟೇ ಶಕ್ತವಾಯಿತು. ಗುರಿ ಬೆನ್ನತ್ತಿದ ಕೋಲ್ಕತಾ ಇನ್ನೆರಡು ಎಸೆತ ಬಾಕಿ ಇರುವಂತೆಯೇ ಗೆಲುವಿನ ದಡ ಸೇರಿತು.

Edited By : Nirmala Aralikatti
PublicNext

PublicNext

18/10/2020 07:52 pm

Cinque Terre

92.87 K

Cinque Terre

9

ಸಂಬಂಧಿತ ಸುದ್ದಿ