ಅಬುಧಾಬಿ : ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೋಲ್ಕತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಲಿವೆ.
ಆರ್ ಸಿಬಿ ಈ ಪಂದ್ಯ ಗೆದ್ದು ಪ್ಲೇ ಆಫ್ ಹಂತವನ್ನು ಸನಿಹಗೊಳಿಸುವ ಅಂದಾಜಿನಲ್ಲಿದ್ದರೆ, ಇತ್ತ ಕೆಕೆಆರ್ ಪಾಲಿಗೆ ಈ ಮ್ಯಾಚ್ ಮಹತ್ವ ಪಡೆದಿದೆ.
ಆರ್ ಸಿಬಿ ಇದುವರೆಗೂ ಆಡಿರುವ 9 ಪಂದ್ಯಗಳಲ್ಲಿ 6ರಲ್ಲಿ ಗೆಲುವು ಸಾಧಿಸಿದ್ದು, ಇನ್ನುಳಿದ ಮೂರರಲ್ಲಿ ಸೋಲು ಅನುಭವಿಸಿದೆ.
ಒಟ್ಟು 12 ಅಂಕಗಳೊಂದಿಗೆ ಐಪಿಎಲ್ ಪಾಯಿಂಟ್ಸ್ ಟೇಬಲ್ ಲ್ಲಿ ಮೂರನೇ ಸ್ಥಾನದಲ್ಲಿದೆ.
ಮತ್ತೊಂದೆಡೆ ಕೋಲ್ಕತ್ತಾ ಆಡಿರುವ 9 ಪಂದ್ಯಗಳಿಂದ 5ರಲ್ಲಿ ಗೆಲುವು ಪಡೆದು ನಾಲ್ಕನೇ ಸ್ಥಾನದಲ್ಲಿದೆ.
ಕಳೆದ ಪಂದ್ಯದಲ್ಲಿ ಬೆಂಗಳೂರು ಫ್ರಾಂಚೈಸಿ, ರಾಜಸ್ಥಾನ್ ರಾಯಲ್ಸ್ ವಿರುದ್ಧ 7 ವಿಕೆಟ್ ಗಳ ಗೆಲುವು ಸಾಧಿಸಿತ್ತು.
ಕೇವಲ 22 ಎಸೆತಗಳಲ್ಲಿ 55 ರನ್ ಗಳನ್ನು ಸಿಡಿಸಿದ್ದ ಎಬಿ ಡಿವಿಲಿಯರ್ಸ್ ಆರ್ ಸಿಬಿ ಗೆಲುವಿನಲ್ಲಿ ಮಹತ್ತರ ಪಾತ್ರವಹಿಸಿದರು.
ನೈಟ್ ರೈಡರ್ಸ್ ತಂಡ ಕಳೆದ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಸೂಪರ್ ಓವರ್ ನಲ್ಲಿ ರೋಚಕ ಗೆಲುವು ಸಾಧಿಸಿತ್ತು.
ಲಾಕಿ ಫರ್ಗೂಸನ್ ಕೋಲ್ಕತಾ ಪರ ಅದ್ಭುತ ಬೌಲಿಂಗ್ ಪ್ರದರ್ಶನ ತೋರಿದ್ದರು.
ಇಂದು ಬಲಿಷ್ಠ ಎರಡು ತಂಡಗಳು ಮುಖಾಮುಖಿಯಾಗಲಿದ್ದು ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಿದೆ.
PublicNext
21/10/2020 02:14 pm