ಅಬುಧಾಬಿ: ಮೊಹಮ್ಮದ್ ಸಿರಾಜ್, ಯಜುವೇಂದ್ರ ಚಹಲ್ ಬೌಲಿಂಗ್ ಅಬ್ಬರದ ಮುಂದೆ ಮಂಕಾದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ 85ಸಸ ರನ್‌ಗಳ ಗುರಿಯನ್ನು ನೀಡಿದೆ.
ಅಬುಧಾಬಿಯ ಶೇಕ್ ಝಯೇದ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ನ 39ನೇ ಪಂದ್ಯದಲ್ಲಿ ಕೋಲ್ಕತ್ತಾ ಬ್ಯಾಟಿಂಗ್ ವೈಫಲ್ಯದಿಂದ 8 ವಿಕೆಟ್ ನಷ್ಟಕ್ಕೆ ಕೇವಲ 84 ರನ್ ಪೇರಿಸಿದೆ. ತಂಡದ ಪರ ನಾಯಕ ಇಯಾನ್ ಮಾರ್ಗನ್ 30 ರನ್ (34 ಎಸೆತ, 3 ಬೌಂಡರಿ, 1 ಸಿಕ್ಸ್) ಹೊರತುಪಡಿಸಿ ಉಳಿದ ಎಲ್ಲ ಆಟಗಾರರು 20 ರನ್‌ಗಳ ಗಡಿ ದಾಟುವಲ್ಲಿ ವಿಫಲರಾದರು.
ಆರ್‌ಸಿಬಿ ಪರ ಮೊಹಮ್ಮದ್ ಸಿರಾಜ್ 3 ವಿಕೆಟ್ ಪಡೆದು ಮಿಂಚಿದರೆ, ಯಜುವೇಂದ್ರ ಚಹಲ್ 2 ವಿಕೆಟ್, ನವದೀಪ್ ಸೈನಿ ಹಾಗೂ ವಾಷಿಂಗ್ಟನ್ ಸುಂದರ್ ತಲಾ ಒಂದು ವಿಕೆಟ್ ಪಡೆದು ತಂಡಕ್ಕೆ ಆಸರೆಯಾದರು.
PublicNext
21/10/2020 09:13 pm