ಶಾರ್ಜಾ: ಐಪಿಎಲ್ 13ನೇ ಆವೃತ್ತಿಯ 41ನೇ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ಇಂಡಿಯ್ಸ್ ತಂಡವು ಬೌಲಿಂಗ್ ಆಯ್ದುಕೊಂಡಿದ್ದು, ಚೆನ್ನೈ ಸೂಪರ್ ಕಿಂಗ್ಸ್ ಬ್ಯಾಟಿಂಗ್ ಮಾಡಲಿದೆ.
ಶಾರ್ಜಾ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಚೆನ್ನೈ ತಂಡಕ್ಕೆ ಗೆಲುವು ಅನಿವಾರ್ಯವಾಗಿದೆ. ಒಂದು ವೇಳೆ ಈ ಪಂದ್ಯದಲ್ಲಿ ಎಂ.ಎಸ್.ಧೋನಿ ನೇತೃತ್ವದ ಪಡೆಗೆ ಸೋಲು ಕಂಡರೆ ಪ್ಲೇ ಆಫ್ ಕನಸು ದೂರವಾಗುತ್ತದೆ. ಇತ್ತ ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾ ಎಡಗೈ ನೋವಿನಿಂದ ಪಂದ್ಯದಿಂದ ಹೊರಗುಳಿದಿದ್ದಾರೆ. ಹೀಗಾಗಿ ಕೀರನ್ ಪೊಲಾರ್ಡ್ ತಂಡವನ್ನು ಮುನ್ನಡೆಸಲಿದ್ದಾರೆ.
ಚೆನ್ನೈ ಸೂಪರ್ ಕಿಂಗ್ಸ್: ಸ್ಯಾಮ್ ಕರ್ರನ್, ಫಾಫ್ ಡು ಪ್ಲೆಸಿಸ್, ಋತುರಾಜ್ ಗಾಯಕವಾಡ್, ಅಂಬಟಿ ರಾಯುಡು, ಎಂಎಸ್ ಧೋನಿ, ನಾರಾಯಣ್ ಜಗದೀಶನ್, ರವೀಂದ್ರ ಜಡೇಜಾ, ದೀಪಕ್ ಚಹಾರ್, ಶಾರ್ದುಲ್ ಠಾಕೂರ್, ಜೋಶ್ ಹೇಜಲ್‌ವುಡ್, ಇಮ್ರಾನ್ ತಾಹಿರ್.
ಮುಂಬೈ ಇಂಡಿಯನ್ಸ್: ಕ್ವಿಂಟನ್ ಡಿ ಕಾಕ್, ಇಶನ್ ಕಿಶನ್, ಸೂರ್ಯಕುಮಾರ್ ಯಾದವ್, ಸೌರಭ್ ತಿವಾರಿ, ಕ್ರುನಾಲ್ ಪಾಂಡ್ಯ, ಹಾರ್ದಿಕ್ ಪಾಂಡ್ಯ, ಕೀರನ್ ಪೊಲಾರ್ಡ್, ನಾಥನ್ ಕೌಲ್ಟರ್-ನೈಲ್, ರಾಹುಲ್ ಚಹರ್, ಟ್ರೆಂಟ್ ಬೌಲ್ಟ್, ಜಸ್ಪ್ರೀತ್ ಬುಮ್ರಾ.
PublicNext
23/10/2020 07:17 pm