ಶಾರ್ಜಾ: ಮುಂಬೈ ಇಂಡಿಯನ್ಸ್ ಮಾರಕ ದಾಳಿಗೆ ತನ್ನರಿಸಿದ ಚೆನ್ನೈ ಸೂಪರ್ ಕಿಂಗ್ಸ್ ಕೇವಲ 115 ರನ್ ಟಾರ್ಗೆಟ್ ನೀಡಿದೆ. ಅಷ್ಟೇ ಅಲ್ಲದೆ ಐಪಿಎಲ್ ಕೆಟ್ಟ ದಾಖಲೆಗೆ ಗುರಿಯಾಗಿದೆ.
ಶಾರ್ಜಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್-13ನೇ ಆವೃತ್ತಿಯ 41ನೇ ಪಂದ್ಯದಲ್ಲಿ ಚೆನ್ನೈ ತಂಡ ಪವರ್ ಪ್ಲೇ ಹಂತದಲ್ಲಿ ಐದು ವಿಕೆಟ್ ಕಳೆದುಕೊಂಡು ಕೇವಲ 25 ರನ್ ಪೇರಿಸಿತ್ತು. ಈ ಮೂಲಕ ಐಪಿಎಲ್‍ನಲ್ಲಿ ಪವರ್ ಪ್ಲೇ ಹಂತದಲ್ಲಿ ಅತ್ಯಂತ ಕೆಟ್ಟ ಪ್ರದರ್ಶನ ನೀಡಿದ ಎರಡನೇ ತಂಡ ಎಂಬ ಕುಖ್ಯಾತಿ ಪಡೆದಿದೆ.
ಇದೇ ಮೊದಲ ಬಾರಿಗೆ ಚೆನ್ನೈ ತಂಡವು ಪವರ್ ಪ್ಲೇನಲ್ಲಿ ತನ್ನ ಐದು ವಿಕೆಟ್ ಕಳೆದುಕೊಂಡಿದೆ. ಇದಕ್ಕೂ ಮೊದಲು 2011ರಲ್ಲಿ ಕೊಚ್ಚಿ ಟಸ್ಕರ್ಸ್ ತಂಡ ಡೆಕ್ಕನ್ ಚಾರ್ಜಸ್ ವಿರುದ್ಧ ಪವರ್ ಪ್ಲೇನಲ್ಲಿ ಆರು ವಿಕೆಟ್ ಕಳೆದುಕೊಂಡು 29 ರನ್ ಸೇರಿಸಿತ್ತು.
PublicNext
23/10/2020 09:40 pm