ಅಬುಧಾಬಿ: 13ನೇ ಆವೃತ್ತಿ ಐಪಿಎಲ್ ಮುಕ್ತಾಯದ ಬಳಿಕ ಚೆನ್ನೈ ಸೂಪರ್ ಕಿಂಗ್ಸ್ ನಾಯಕ ಎಂ.ಎಸ್. ಧೋನಿ, ಐಪಿಎಲ್ ನಿಂದ ನಿವೃತ್ತಿಯಾಗಲಿದ್ದಾರೆ.
ಮುಂಬೈ ಇಂಡಿಯನ್ಸ್ ತಂಡದ ಆಟಗಾರರಾದ ಹಾರ್ಧಿಕ್ ಪಾಂಡ್ಯ ಹಾಗೂ ಕೃನಾಲ್ ಪಾಂಡ್ಯ ಅವರಿಗೆ ಚೆನ್ನೈ ಸೂಪರ್ ಕಿಂಗ್ಸ್ ನಾಯಕ ಎಂಎಸ್ ಧೋನಿ ತಮ್ಮ ಜರ್ಸಿಯನ್ನು ಗಿಫ್ಟ್ ನೀಡಿದ್ದು, ಈ ಕುರಿತ ಫೋಟೋವನ್ನು ಐಪಿಎಲ್ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ.
ಧೋನಿ ರಾಜಸ್ತಾನ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಇಂಗ್ಲೆಂಡ್ ಆಟಗಾರ ಜಾಸ್ ಬಟ್ಲರ್ ಅವರಿಗೆ ತಮ್ಮ ಜರ್ಸಿಯನ್ನು ಗಿಫ್ಟ್ ನೀಡಿದ್ದರು.
ಇದು ಧೋನಿ ಐಪಿಎಲ್ ನಲ್ಲಿ ಆಡಿದ 200ನೇ ಪಂದ್ಯವಾಗಿತ್ತು. ಆದ್ದರಿಂದ ಅಭಿಮಾನಿಗಳು ಹೆಚ್ಚು ಗಮನ ನೀಡಿರಲಿಲ್ಲ.
ಆದರೆ ಪಾಂಡ್ಯ ಬ್ರದರ್ಸ್ ಸೇರಿದಂತೆ ಹಲವು ಆಟಗಾರರಿಗೆ ಧೋನಿ ಪಂದ್ಯದ ಬಳಿಕ ತಮ್ಮ ಜರ್ಸಿಯನ್ನು ಗಿಫ್ಟ್ ನೀಡುತ್ತಿರುವುದು ಅಭಿಮಾನಿಗಳಲ್ಲಿ ಭಾರೀ ಕುತೂಹಲ ಮೂಡಿಸಿದೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯೆ ನೀಡಿರುವ ಹಲವರು ಇದು ಐಪಿಎಲ್ ನಿಂದ ಧೋನಿ ನಿವೃತ್ತಿಯ ಮುನ್ಸೂಚನೆ ಎಂದು ಹೇಳಿದ್ದಾರೆ.
ಈ ಹಿಂದೆ ಯಾರು ಊಹೆ ಮಾಡದ ರೀತಿಯಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಧೋನಿ ನಿವೃತ್ತಿ ಘೋಷಿಸಿದ್ದರು.
ತಮ್ಮ 16 ವರ್ಷಗಳ ಅಂತಾರಾಷ್ಟ್ರೀಯ ಕ್ರಿಕೆಟ್ ವೃತ್ತಿ ಜೀವನಕ್ಕೆ ವಿದಾಯ ಘೋಷಿಸಿದ್ದ ಧೋನಿ, ಐಪಿಎಲ್ ನಲ್ಲಿ ಮಾತ್ರ ಮುಂದುವರಿದಿದ್ದರು.
ಸದ್ಯ ಸಾಮಾಜಿಕ ಜಾಲತಾಣದಲ್ಲಿ ಧೋನಿ ಇತರೇ ಆಟಗಾರರಿಗೆ ತಮ್ಮ ಜರ್ಸಿಯನ್ನು ಗಿಫ್ಟ್ ನೀಡುತ್ತಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ.
PublicNext
24/10/2020 04:16 pm