ದುಬೈ: ಐಪಿಎಲ್ 13ನೇ ಆವೃತ್ತಿಯ 44ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಗೆಲುವು ದಾಖಲಿಸುವ ಮೂಲಕ ಅಗ್ರಸ್ಥಾನಕ್ಕೇರುವ ಉತ್ಸಾಹದಲ್ಲಿ ರಾಯನ್ ಚಾಲೆಂಜರ್ಸ್ ಬೆಂಗಳೂರು ಇದೆ.
ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಇಂದು ನಡೆಯಲಿರುವ ಪಂದ್ಯದಲ್ಲಿ ಆರ್‌ಸಿಬಿ ಹಾಗೂ ಸಿಎಸ್‌ಕೆ ತಂಡಗಳು ಮುಖಾಮುಖಿಯಾಗಲಿವೆ. ಆರ್‌ಸಿಬಿ ಆಡಿರುವ ಕೊನೆಯ ಐದು ಪಂದ್ಯಗಳಲ್ಲಿ ನಾಲ್ಕರಲ್ಲಿ ಜಯ ಸಾಧಿಸಿ ಉತ್ತಮ ಫಾರ್ಮ್ನಲ್ಲಿದೆ. ಇತ್ತ ಸೋಲಿನಿಂದ ಕಂಗೆಟ್ಟಿರುವ ಸಿಎಸ್‌ಕೆಗೆ ಇಂದಿನ ಪಂದ್ಯದಲ್ಲಿ ಗೆಲುವು ಅನಿವಾರ್ಯವಾಗಿದೆ.
ಇಂದಿನ ಪಂದ್ಯವು ಸಿಎಸ್‌ಕೆಗೆ ಮಾಡು ಇಲ್ಲವೇ ಮಡಿ ಪಂದ್ಯವಾಗಿದ್ದು, ಇಂದಿನ ಪಂದ್ಯದಲ್ಲಿ ಸೋತರೆ ಟೂರ್ನಿಯಿಂದ ಹೊರಬೀಳುವ ಮೊದಲ ತಂಡ ಎನಿಸಿಕೊಳ್ಳಲಿದೆ. ಇತ್ತ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿರುವ ಆರ್‌ಸಿಬಿ ಇಂದು ಗೆಲ್ಲುವ ಮೂಲಕ ಪ್ಲೇ ಆಫ್ಗೇರುವುದನ್ನು ಖಚಿತಪಡಿಸಲಿದೆ.
PublicNext
25/10/2020 02:47 pm