ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

21 ಎಸೆತದಲ್ಲಿ 60 ರನ್‌ ಚಚ್ಚಿದ ಹಾರ್ದಿಕ್ ಪಾಂಡ್ಯ- ರಾಜಸ್ಥಾನ್‌ಗೆ 196 ರನ್‌ಗಳ ಗುರಿ

ಅಬುಧಾಬಿ: ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಸ್ಫೋಟಕ ಬ್ಯಾಟಿಂಗ್ ಹಾಗೂ ಸೂರ್ಯಕುಮಾರ್ ಯಾದವ್ ಅಬ್ಬರದಿಂದ ಮುಂಬೈ ಇಂಡಿಯನ್ಸ್ ತಂಡವು ರಾಜಸ್ಥಾನ್ ರಾಯಲ್ಸ್‌ಗೆ 196 ರನ್‌ಗಳ ಗುರಿ ನೀಡಿದೆ.

ಅಬುಧಾಬಿಯ ಶೇಖ್ ಝಾಯೆದ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಐಪಿಎಲ್​-13ನೇ ಆವೃತ್ತಿಯ 45ನೇ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ತಂಡವು 5ವಿಕೆಟ್ ನಷ್ಟಕ್ಕೆ 195 ರನ್‌ ಪೇರಿಸಿದೆ. ಮುಂಬೈ ಪರ ಹಾರ್ದಿಕ್ ಪಾಂಡ್ಯ 60 ರನ್ (21 ಎಸೆತ, 2 ಬೌಂಡರಿ, 7 ಸಿಕ್ಸರ್), ಸೂರ್ಯಕುಮಾರ್ ಯಾದವ್ 40 ರನ್ (26 ಎಸೆತ, 4 ಬೌಂಡರಿ, 1 ಸಿಕ್ಸ್), ಇಶಾನ್ ಕಿಶನ್ 37 ರನ್, ಸೌರಭ್ ತಿವಾರಿ 34 ರನ್ ಬಾರಿಸಿದರು.

ಮುಂಬೈ ಹಂಗಾಮಿ ನಾಯಕ ಕೀರನ್ ಪೊಲಾರ್ಡ್ ಬ್ಯಾಟಿಂಗ್ ಆಯ್ದುಕೊಂಡರು. ಆದರೆ ಈ ಬಾರಿ ಕ್ವಿಂಟನ್ ಡಿ ಕಾಕ್ ತಂಡಕ್ಕೆ ಉತ್ತಮ ಆರಂಭ ಒದಗಿಸುವಲ್ಲಿ ವಿಫಲರಾದರು. ವೈಯುಕ್ತಿಕ 6 ರನ್​ಗಳಿಸಿದ್ದ ವೇಳೆ ಡಿಕಾಕ್ ಜೋಫ್ರಾ ಆರ್ಚರ್ ಎಸೆತದಲ್ಲಿ ಕ್ಲೀನ್ ಬೌಲ್ಡ್ ಆಗಿ ಹೊರ ನಡೆದರು.

ಮತ್ತೊಂದೆಡೆ ಗಟ್ಟಿಯಾಗಿ ನೆಲೆಯೂರಿದ್ದ ಇಶಾನ್ ಕಿಶನ್ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದರೆ, ಎರಡನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದ ಸೂರ್ಯಕುಮಾರ್ ಯಾದವ್ ಆರಂಭದಿಂದಲೇ ಅಬ್ಬರಿಸಿದರು. ಪರಿಣಾಮ ಪವರ್​ಪ್ಲೇ ಮುಕ್ತಾಯದ ವೇಳೆಗೆ ತಂಡದ ಮೊತ್ತ 59 ರನ್‌ಗೆ ತಲುಪಿತು.

ಕಾರ್ತಿಕ್ ತ್ಯಾಗಿ ಎಸೆದ 11ನೇ ಓವರ್​ನಲ್ಲಿ ಜೋಫ್ರಾ ಆರ್ಚರ್ ಹಿಡಿದ ಅದ್ಭುತ ಕ್ಯಾಚ್​​ಗೆ ಇಶಾನ್ ಕಿಶನ್ ತಮ್ಮ ಇನಿಂಗ್ಸ್​ ಅಂತ್ಯಗೊಳಿಸಿದರು. ಸೂರ್ಯಕುಮಾರ್ ಯಾದವ್ (40) ವಿಕೆಟ್ ಒಪ್ಪಿಸಿದರು. ಬಳಿಕ ಬಂದ ಪೊಲಾರ್ಡ್​ ಒಂದು ಸಿಕ್ಸರ್ ಸಿಡಿಸಿ ಶ್ರೇಯಸ್ ಗೋಪಾಲ್​ ಎಸೆತದಲ್ಲಿ ಕ್ಲೀನ್ ಬೌಲ್ಡ್​ ಆಗಿ ನಿರ್ಗಮಿಸಿದರು. ಕೊನೆಯಲ್ಲಿ ಹಾರ್ದಿಕ್ ಪಾಂಡ್ಯ ಅಬ್ಬರಿಸಿದ ಪರಿಣಾಮ ಮುಂಬೈ ತಂಡವು 196 ರನ್‌ಗಳ ಬೃಹತ್‌ ಮೊತ್ತದ ಗುರಿಯನ್ನು ರಾಜಸ್ಥಾನ್‌ಗೆ ನೀಡಲು ಸಾಧ್ಯವಾಯಿತು.

Edited By : Vijay Kumar
PublicNext

PublicNext

25/10/2020 09:24 pm

Cinque Terre

70.95 K

Cinque Terre

14

ಸಂಬಂಧಿತ ಸುದ್ದಿ