ಅಬುಧಾಬಿ: ಬೆನ್ ಸ್ಟೋಕ್ಸ್ ಸ್ಫೋಟಕ ಶತಕ ಹಾಗೂ ಸಂಜು ಸ್ಯಾಮ್ಸನ್ ಅಬ್ಬರ ಅರ್ಧಶತಕದಿಂದ ರಾಜಸ್ಥಾನ್ ರಾಯಲ್ಸ್ ತಂಡವು ಮುಂಬೈ ಇಂಡಿಯನ್ಸ್ ವಿರುದ್ಧ 8 ವಿಕೆಟ್‌ಗಳಿಂದ ಗೆದ್ದು ಬೀಗಿದೆ.
ಅಬುಧಾಬಿಯ ಶೇಖ್ ಝಾಯೆದ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಐಪಿಎಲ್-13ನೇ ಆವೃತ್ತಿಯ 45ನೇ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ತಂಡವು 196 ರನ್‌ಗಳ ಗುರಿ ನೀಡಿತ್ತು. ಬೃಹತ್ ಮೊತ್ತದ ಗುರಿ ಬೆನ್ನಟ್ಟಿದ ರಾಜಸ್ಥಾನ್ 18.2 ಓವರ್‌ಗಳಲ್ಲಿ 2 ವಿಕೆಟ್ ನಷ್ಟಕ್ಕೆ 196 ರನ್ ಚಚ್ಚಿ ಗೆಲುವು ದಾಖಲಿಸಿದೆ.
ರಾಜಸ್ಥಾನ್ ರಾಯಲ್ಸ್ ಪರ ಬೆನ್ ಸ್ಟೋಕ್ಸ್ ಅಜೇಯ 107 ರನ್ (60 ಎಸೆತ, 14 ಬೌಂಡರಿ, 3 ಸಿಕ್ಸರ್), ಸಂಜು ಸ್ಯಾಮ್ಸನ್ ಅಜೇಯ 54 ರನ್ (31 ಎಸೆತ, 4 ಬೌಂಡರಿ, 3 ಸಿಕ್ಸರ್), ರಾಬಿನ್ ಉತ್ತಪ್ಪ 13 ರನ್ ಹಾಗೂ ನಾಯಕ ಸ್ಟೀವ್ ಸ್ಮಿತ್ 11 ರನ್ ಗಳಿಸಿದರು.
ಇದಕ್ಕೂ ಮುನ್ನ ಬ್ಯಾಟಿಂಗ್ ಮಾಡಿದ್ದ ಮುಂಬೈ ತಂಡವು 5ವಿಕೆಟ್ ನಷ್ಟಕ್ಕೆ 195 ರನ್ ಪೇರಿಸಿತ್ತು. ಮುಂಬೈ ಪರ ಹಾರ್ದಿಕ್ ಪಾಂಡ್ಯ 60 ರನ್ (21 ಎಸೆತ, 2 ಬೌಂಡರಿ, 7 ಸಿಕ್ಸರ್), ಸೂರ್ಯಕುಮಾರ್ ಯಾದವ್ 40 ರನ್ (26 ಎಸೆತ, 4 ಬೌಂಡರಿ, 1 ಸಿಕ್ಸ್), ಇಶಾನ್ ಕಿಶನ್ 37 ರನ್, ಸೌರಭ್ ತಿವಾರಿ 34 ರನ್ ಬಾರಿಸಿದ್ದರು.
PublicNext
25/10/2020 11:12 pm