ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

IPL 2020- RCB vs MI: ಇಂದು ಹೈವೋಲ್ಟೇಜ್ ಮ್ಯಾಚ್

ಅಬುಧಾಬಿ: ಐಪಿಎಲ್ 13ನೇ ಆವೃತ್ತಿಯ 48ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಕಾದಾಡಲಿವೆ.

ಅಬುಧಾಬಿಯ ಶೈಕ್ ಝಾಯೆದ್ ಸ್ಟೇಡಿಯಂನಲ್ಲಿ ಇಂದು ನಡೆಯಲಿರುವ ಈ ಪಂದ್ಯ ಹೈವೋಲ್ಟೇಜ್ ಮ್ಯಾಚ್ ಆಗಿದೆ. ಅಂಕಪಟ್ಟಿಯ ಅಗ್ರಸ್ಥಾನದಲ್ಲಿರುವ ಮುಂಬೈ ಆಡಿರುವ 11 ಪಂದ್ಯಗಳಲ್ಲಿ 7 ಗೆಲುವು ದಾಖಲಿಸಿದೆ. ಇತ್ತ ಆರ್‌ಸಿಬಿ ಕೂಡ 11 ಪಂದ್ಯಗಳನ್ನು ಆಡಿ 7ರಲ್ಲಿ ಜಯ ಗಳಿಸಿದೆ. ಆದರೆ ನೆಟ್ ರನ್‌ರೇಟ್ ಕಡಿಮೆ ಇರುವ ಕಾರಣ ಕೊಹ್ಲಿ ಪಡೆ ದ್ವಿತೀಯ ಸ್ಥಾನದಲ್ಲಿದೆ.

ಐಪಿಎಲ್‌ನಲ್ಲಿ ಆರ್‌ಸಿಬಿ ಹಾಗೂ ಮುಂಬೈ 28 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ಪೈಕಿ ಮುಂಬೈ 18 ರಲ್ಲಿ ಗೆದ್ದಿದ್ದರೆ, ಬೆಂಗಳೂರು ಕೇವಲ 10ರಲ್ಲಿ ಜಯಶಾಲಿಯಾಗಿದೆ.

ಸಂಭಾವ್ಯ ಆಟಗಾರರು:

ಮುಂಬೈ: ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ಸೌರಭ್ ತಿವಾರಿ, ಹಾರ್ದಿಕ್ ಪಾಂಡ್ಯ, ಕೀರನ್ ಪೊಲಾರ್ಡ್ (ನಾಯಕ), ಕ್ರುನಾಲ್ ಪಾಂಡ್ಯ, ಜೇಮ್ಸ್ ಪ್ಯಾಟಿನ್ಸನ್, ರಾಹುಲ್ ಚಾಹರ್, ಟ್ರೆಂಟ್ ಬೌಲ್ಟ್, ಜಸ್‌ಪ್ರೀತ್ ಬೂಮ್ರಾ.

ಆರ್‌ಸಿಬಿ: ದೇವದತ್ ಪಡಿಕ್ಕಲ್, ಆ್ಯರನ್ ಫಿಂಚ್, ವಿರಾಟ್ ಕೊಹ್ಲಿ (ನಾಯಕ), ಎಬಿ ಡಿವಿಲಿಯರ್ಸ್ (ವಿಕೆಟ್ ಕೀಪರ್), ಗುರ್ಕೀರತ್ ಸಿಂಗ್, ಕ್ರಿಸ್ ಮೋರಿಸ್, ವಾಷಿಂಗ್ಟನ್ ಸುಂದರ್, ಇಸುರು ಉದಾನ, ನವದೀಪ್ ಸೈನಿ, ಮೊಹಮ್ಮದ್ ಸಿರಾಜ್, ಯಜುವೇಂದ್ರ ಚಾಹಲ್.

Edited By : Vijay Kumar
PublicNext

PublicNext

28/10/2020 03:45 pm

Cinque Terre

49.55 K

Cinque Terre

21

ಸಂಬಂಧಿತ ಸುದ್ದಿ