ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

IPL 2020- RCB vs MI: ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಮುಂಬೈ

ಅಬುಧಾಬಿ: ಐಪಿಎಲ್ 13ನೇ ಆವೃತ್ತಿಯ 48ನೇ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ತಂಡವು ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಬೌಲಿಂಗ್ ಆಯ್ದುಕೊಂಡಿದೆ.

ಅಬುಧಾಬಿಯ ಶೈಕ್ ಝಾಯೆದ್ ಸ್ಟೇಡಿಯಂನಲ್ಲಿ ಇಂದು ನಡೆಯುತ್ತಿರುವ ಈ ಪಂದ್ಯವು ಹೈವೋಲ್ಟೇಜ್ ಮ್ಯಾಚ್ ಆಗಿದೆ. ಈ ಪಂದ್ಯಕ್ಕೂ ಮುಂಬೈ ಇಂಡಿಯ್ಸ್‌ ನಾಯಕ ರೋಹಿತ್ ಶರ್ಮಾ ಅಲಭ್ಯವಾಗಿದ್ದಾರೆ. ಹೀಗಾಗಿ ಹಂಗಾಮಿ ನಾಯಕನಾಗಿ ಕೀರನ್ ಪೊಲಾರ್ಡ್ ತಂಡವನ್ನು ಮುನ್ನಡೆಸಲಿದ್ದಾರೆ.

ಈ ಪಂದ್ಯದಲ್ಲಿ ಆರ್‌ಸಿಬಿ ಗೆಲುವು ದಾಖಲಿಸಿದರೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೆ ಏರಲಿದೆ. ಐಪಿಎಲ್‌ನಲ್ಲಿ ಆರ್‌ಸಿಬಿ ಹಾಗೂ ಮುಂಬೈ 28 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ಪೈಕಿ ಮುಂಬೈ 18 ರಲ್ಲಿ ಗೆದ್ದಿದ್ದರೆ, ಬೆಂಗಳೂರು ಕೇವಲ 10ರಲ್ಲಿ ಜಯಶಾಲಿಯಾಗಿದೆ.

ಮುಂಬೈ: ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ಸೌರಭ್ ತಿವಾರಿ, ಹಾರ್ದಿಕ್ ಪಾಂಡ್ಯ, ಕೀರನ್ ಪೊಲಾರ್ಡ್ (ನಾಯಕ), ಕ್ರುನಾಲ್ ಪಾಂಡ್ಯ, ಜೇಮ್ಸ್ ಪ್ಯಾಟಿನ್ಸನ್, ರಾಹುಲ್ ಚಾಹರ್, ಟ್ರೆಂಟ್ ಬೌಲ್ಟ್, ಜಸ್‌ಪ್ರೀತ್ ಬೂಮ್ರಾ.

ಆರ್‌ಸಿಬಿ: ದೇವದತ್ ಪಡಿಕ್ಕಲ್, ಆ್ಯರನ್ ಫಿಂಚ್, ವಿರಾಟ್ ಕೊಹ್ಲಿ (ನಾಯಕ), ಎಬಿ ಡಿವಿಲಿಯರ್ಸ್ (ವಿಕೆಟ್ ಕೀಪರ್), ಗುರ್ಕೀರತ್ ಸಿಂಗ್, ಶಿವಂ ದುಬೆ, ಕ್ರಿಸ್ ಮೋರಿಸ್, ವಾಷಿಂಗ್ಟನ್ ಸುಂದರ್, ಮೊಹಮ್ಮದ್ ಸಿರಾಜ್, ಯಜುವೇಂದ್ರ ಚಾಹಲ್, ಡೇಲ್ ಸ್ಟೇನ್.

Edited By : Vijay Kumar
PublicNext

PublicNext

28/10/2020 07:09 pm

Cinque Terre

63.24 K

Cinque Terre

32

ಸಂಬಂಧಿತ ಸುದ್ದಿ