ಅಬುಧಾಬಿ: ಸೂರ್ಯಕುಮಾರ್ ಯಾದವ್ ಅಬ್ಬರದ ಅರ್ಧಶತಕದ ಸಹಾಯದಿಂದ ಮುಂಬೈ ಇಂಡಿಯ್ಸ್ ತಂಡವು ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ 5 ವಿಕೆಟ್‌ಗಳಿಂದ ಗೆದ್ದು ಬೀಗಿದೆ.
ಅಬುಧಾಬಿ ಶೇಕ್ ಝಯೇದ್ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ನ 48ನೇ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಆರ್‌ಸಿಬಿ 164 ರನ್‌ಗಳ ಟಾರ್ಗೆಟ್ ನೀಡಿತ್ತು. ಈ ಗುರಿ ಬೆನ್ನಟ್ಟಿದ ಮುಂಬೈ 19.1 ಓವರಿನಲ್ಲಿ 5 ವಿಕೆಟ್‌ಗಳಿಂದ 166 ರನ್ ಚಚ್ಚಿ ಗೆಲುವು ದಾಖಲಿಸಿದೆ. ಮುಂಬೈ ಪರ ಸೂರ್ಯಕುಮಾರ್ ಯಾದವ್ ಅಜೇಯ 79 ರನ್ (43 ಎಸೆತ, 10 ಬೌಂಡರಿ, 3 ಸಿಕ್ಸರ್) ಹಾಗೂ ಇಶಾನ್ ಕಿಶನ್ 25 ರನ್ (19 ಎಸೆತ, 3 ಬೌಂಡರಿ, 1 ಸಿಕ್ಸ್) ಬಾರಿಸಿದರು.
ಇದಕ್ಕೂ ಮುನ್ನ ಟಾಸ್ ಸೋತು ಬ್ಯಾಟಿಂಗ್ ಮಾಡಿದ್ದ ಆರ್‌ಸಿಬಿ 6 ವಿಕೆಟ್ ನಷ್ಟಕ್ಕೆ 164 ರನ್ ಗಳಿಸಿತ್ತು. ಕೊಹ್ಲಿ ಪಡೆ ಪರ ದೇವದತ್ ಪಡಿಕ್ಕಲ್ 74 ರನ್ (45 ಎಸೆತ, 12 ಬೌಂಡರಿ, 1 ಸಿಕ್ಸ್) ಹಾಗೂ ಜೋಷ್ ಫಿಲಿಪ್ 33 ರನ್ (24 ಎಸೆತ, 4 ಬೌಂಡರಿ, 1 ಸಿಕ್ಸ್) ಸಿಡಿಸಿದ್ದರು. ಮುಂಬೈ ಇಂಡಿಯನ್ಸ್ ಪರ ಜಸ್‌ಪ್ರೀತ್ ಬುಮ್ರಾ 3 ವಿಕೆಟ್ (4 ಓವರ್, 14 ರನ್, 1 ಮೇಡನ್) ಪಡೆದು ಮಿಂಚಿದರೆ, ರಾಹುಲ್ ಚಹರ್, ಟ್ರೆಂಟ್ ಬೌಲ್ಟ್ ಹಾಗೂ ಕೀರನ್ ಪೊಲಾರ್ಡ್ ತಲಾ ಒಂದು ವಿಕೆಟ್ ಪಡೆದು ತಂಡಕ್ಕೆ ಆಸರೆಯಾಗಿದ್ದರು.
PublicNext
28/10/2020 11:07 pm