ದುಬೈ: ಐಪಿಎಲ್-13ನೇ ಆವೃತ್ತಿಯ 49ನೇ ಪಂದ್ಯದಲ್ಲಿ ಇಂದು ಕೋಲ್ಕತ್ತಾ ನೈಟ್ ರೈಡರ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಮುಖಾಮುಖಿ ಆಗಲಿವೆ.
ದುಬೈ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿರುವ ಪಂದ್ಯವು ಭಾರೀ ಕುತೂಹಲವನ್ನು ಕೆರಳಿಸಿದೆ. ಈಗಾಗಲೇ ಟೂರ್ನಿಯಿಂದ ಈಗಾಗಲೇ ಹೊರಬಿದ್ದಿರುವ ಚೆನ್ನೈ ಅಂತಿಮ ಹಂತದಲ್ಲಾದರೂ ಗೆಲುವಿನ ಮುಖ ನೋಡಲು ಬಯಸುತ್ತಿದ್ದರೆ ಕೋಲ್ಕತ್ತಾ ನೈಟ್ ರೈಡರ್ಸ್‌ಗೆ ಇಂದಿನ ಪಂದ್ಯ ಅತ್ಯಂತ ಮಹತ್ವದ್ದಾಗಿದೆ.
ಸಂಭವನೀಯ ಆಟಗಾರರ ಪಟ್ಟಿ
ಚೆನ್ನೈ: ಋತುರಾಜ್ ಗಾಯಕ್ವಾಡ್, ಫಾಫ್ ಡುಪ್ಲೆಸಿ, ಅಂಬಟಿ ರಾಯುಡು, ಎಂ ಎಸ್ ಧೋನಿ (ನಾಯಕ), ಎನ್ ಜಗದೀಸನ್, ಸ್ಯಾಮ್ ಕರ್ರನ್, ರವೀಂದ್ರ ಜಡೇಜಾ, ಮಿಚೆಲ್ ಸ್ಯಾಂಟ್ನರ್, ದೀಪಕ್ ಚಹರ್, ಇಮ್ರಾನ್ ತಾಹಿರ್, ಮೊನು ಕುಮಾರ್.
ಕೆಕೆಆರ್: ಶುಭ್‌ಮನ್ ಗಿಲ್, ನಿತೀಶ್ ರಾಣಾ, ರಾಹುಲ್ ತ್ರಿಪಾಠಿ, ದಿನೇಶ್ ಕಾರ್ತಿಕ್, ಇಯಾನ್ ಮಾರ್ಗನ್ (ನಾಯಕ), ಕಮಲೇಶ್ ನಾಗರಕೋಟಿ, ಸುನಿಲ್ ನರೈನ್, ಪ್ಯಾಟ್ ಕಮಿನ್ಸ್, ಲಾಕಿ ಫಗ್ರ್ಯೂಸನ್, ಚಕ್ರವರ್ತಿ, ಪ್ರಸಿದ್ಧ್.
PublicNext
29/10/2020 04:18 pm