ದುಬೈ: ಬೆನ್ ಸ್ಟೋಕ್ಸ್ ಹಾಗೂ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್‌ನಿಂದ ರಾಜಸ್ಥಾನ್ ರಾಯಲ್ಸ್ ತಂಡವು ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ 7 ವಿಕೆಟ್‌ಗಳಿಂದ ಗೆದ್ದು ಬೀಗಿದೆ.
ಅಬುಧಾಬಿಯ ಶೇಖ್ ಝಾಯೆದ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ನ 50ನೇ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ 185 ರನ್ ಚಚ್ಚಿ ಟಾರ್ಗೆಟ್ ನೀಡಿತ್ತು. ಗುರಿ ಬೆನ್ನಟ್ಟಿದ ರಾಜಸ್ಥಾನ್ ಇನ್ನೂ 15 ಎಸೆತಗಳು ಬಾಕಿ ಇರುವಂತೆ 186 ರನ್ ಸಿಡಿಸಿತು. ಈ ಮೂಲಕ ತನ್ನ ಪ್ಲೇ ಆಫ್ ಕನಸನ್ನು ಜೀವಂತವಾಗಿ ಇಟ್ಟುಕೊಂಡಿದೆ. ಜೊತೆಗೆ ಪಂಜಾಬ್ ಗೆಲುವಿನ ಓಟಕ್ಕೆ ಬ್ರೇಕ್ ಹಾಕಿದೆ. ಪರಿಣಾಮ ಸುಲಭವಾಗಿ ಪ್ಲೇ ಆಫ್ ತಲುಪುವ ದಾರಿಯನ್ನು ಪಂಜಾಬ್ ಕಳೆದುಕೊಂಡಿದೆ.
ಮೊದಲು ಬ್ಯಾಟಿಂಗ್ ಮಾಡಿದ್ದ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಪರವಾಗಿ ಕ್ರಿಸ್ ಗೇಲ್ 99 ರನ್ (63 ಎಸೆತ, 6 ಬೌಂಡರಿ ಮತ್ತು 8 ಸಿಕ್ಸರ್) ಹಾಗೂ ನಾಯಕ ರಾಹುಲ್ 46 ರನ್ (41 ಎಸೆತ, 3 ಬೌಂಡರಿ, 2 ಸಿಕ್ಸರ್) ಸಿಡಿಸಿದ್ದರು. ಈ ಮೂಲಕ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ 185ಗಳ ಗುರಿ ನೀಡಿದ್ದರು.
ಬಳಿಕ ಬ್ಯಾಟಿಂಗ್ ಮಾಡಿದ ರಾಜಸ್ಥಾನ್ ಮೊದಲ ಬಾಲಿನಿಂದಲೇ ಪಂಜಾಬ್ ಬೌಲರ್ ಗಳ ಮೇಲೆ ದಾಳಿ ಮಾಡಿತು. ಬೆನ್ ಸ್ಟೋಕ್ಸ್ 50 ರನ್ ಹಾಗೂ ಸಂಜು ಸ್ಯಾಮ್ಸನ್ 48 ರನ್ ಚಚ್ಚಿ ತಂಡದ ಗೆಲುವಿಗೆ ಪ್ರಮುಖ ಪಾತ್ರವಹಿಸಿದರು. ಓಪನರ್ ರಾಬಿನ್ ಉತ್ತಪ್ಪ 30 ರನ್ ಗಳಿಸಿದರೆ, ಕೊನೆಯಲ್ಲಿ ನಾಯಕ ಸ್ಟೀವ್ ಸ್ಮಿತ್ 31 ರನ್ ಹಾಗೂ ಬಲ್ಟರ್ 22 ರನ್ ಪೇರಿಸಿದರು.
PublicNext
31/10/2020 07:16 am