ಅಬುಧಾಬಿ: ಯುನಿವರ್ಸಲ್ ಬಾಸ್ ಖ್ಯಾತಿಯ ಕಿಂಗ್ಸ್ ಇಲೆವೆನ್ ಪಂಜಾಬ್ ಸ್ಫೋಟಕ ಬ್ಯಾಟ್ಸ್‌ಮನ್ ಕ್ರಿಸ್ ಗೇಲ್ ಟಿ20 ಇತಿಹಾಸದಲ್ಲಿ ದಾಖಲೆ ಬರೆದಿದ್ದಾರೆ.
ಐಪಿಎಲ್ 13ನೇ ಆವೃತ್ತಿಯ 50ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ 8 ಸಿಕ್ಸರ್ ಸಿಡಿಸಿ ಕ್ರಿಸ್ ಗೇಲ್ ಹೊಸ ದಾಖಲೆಗೆ ಸಾಕ್ಷಿಯಾಗಿದ್ದಾರೆ. ಹೊಡಿಬಡಿ ಆಟಕ್ಕೆ ಹೊಂದಿಕೊಳ್ಳುವಂತೆ ಬ್ಯಾಟ್ ಬೀಸುವ ಗೇಲ್ ಸಿಕ್ಸರ್ ಸಿಡಿಸುವುದರಲ್ಲಿ ನಿಸ್ಸೀಮರು. ಈಗ ಟಿ20ಯಲ್ಲಿ ಮೊದಲ ಬಾರಿಗೆ 1 ಸಾವಿರ ಸಿಕ್ಸರ್ ಸಿಡಿಸಿದ ವಿಶ್ವದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಗೇಲ್ ಪಾತ್ರರಾಗಿದ್ದಾರೆ.
ರಾಜಸ್ಥಾನ್ ವಿರುದ್ಧ ಶುಕ್ರವಾರ ನಡೆದ ಪಂದ್ಯದಲ್ಲಿ ಎರಡನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡಿದ ಗೇಲ್ ಅವರು, 63 ಎಸೆತದಲ್ಲಿ 6 ಬೌಂಡರಿ ಮತ್ತು 8 ಸಿಕ್ಸರ್ ಸಮೇತ ಬರೋಬ್ಬರಿ 99 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು. ಈ ಮೂಲಕ ಟಿ20ಯಲ್ಲಿ ಸಾವಿರ ಸಿಕ್ಸರ್ ಸಿಡಿಸಿದ ದಾಖಲೆ ಮಾಡಿದರು. ವೆಸ್ಟ್ ಇಂಡೀಸ್ ಪರ ಅಂತಾರಾಷ್ಟ್ರೀಯ ಟಿ20 ಪಂದ್ಯ, ಐಪಿಎಲ್ ಮತ್ತು ಬಿಗ್ ಬ್ಯಾಷ್ ಸೇರಿದಂತೆ ಗೇಲ್ ಹಲವಾರು ಟಿ-20 ಟೂರ್ನಿಗಳನ್ನು ಆಡಿದ್ದಾರೆ.
PublicNext
31/10/2020 07:33 am