ಶಾರ್ಜಾ : ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್ ರೈಸರ್ಸ್ ಹೈದರಾಬಾದ್ ತಂಡ ಐಪಿಎಲ್ ಅಖಾಡದಲ್ಲಿ ಸೆಣಸಾಟ ನಡೆಸುತ್ತಿವೆ.
ಸತತ 2 ಸೋಲಿನಿಂದ ಕಂಗೆಟ್ಟಿರುವ ಆರ್ ಸಿಬಿ ತಂಡ ಪ್ಲೇಆಫ್ ಹಂತಕ್ಕೇರುವ ದೃಷ್ಟಿಯಿಂದ ಮಹತ್ವ ಪಡೆದಿದೆ.
ಸನ್ ರೈಸರ್ಸ್ ಹೈದರಾಬಾದ್ ತಂಡಕ್ಕೂ ಇದು ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ.
ಈಗಾಗಲೇ ಟಾಸ್ ಗೆದ್ದ ಹೈದರಾಬಾದ್ ತಂಡದ ನಾಯಕ ಡೇವಿಡ್ ವಾರ್ನರ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
ಎಸ್ ಆರ್ ಹೆಚ್ ಪರ ವಿಜಯ್ ಶಂಕರ್ ಇಂಜುರಿಗೆ ತುತ್ತಾದ ಪರಿಣಾಮ ಇವರ ಬದಲು ಅಭಿಷೇಕ್ ಶರ್ಮಾ ಸ್ಥಾನ ಪಡೆದುಕೊಂಡಿದ್ದಾರೆ.
ಸನ್ ರೈಸರ್ಸ್ ಹೈದರಾಬಾದ್: ಡೇವಿಡ್ ವಾರ್ನರ್ (ನಾಯಕ), ಕೇನ್ ವಿಲಿಯಮ್ಸನ್, ಮನೀಷ್ ಪಾಂಡೆ, ವೃದ್ದಿಮಾನ್ ಸಾಹ, ಜೇಸನ್ ಹೋಲ್ಡರ್, ಅಭಿಷೇಕ್ ಶರ್ಮಾ, ಶಹ್ಬಾಜ್ ನದೀಂ, ರಶೀದ್ ಖಾನ್, ಅಬ್ದುಲ್ ಸಮದ್, ಸಂದೀಪ್ ಶರ್ಮಾ, ಟಿ. ನಟರಾಜನ್.
ಇತ್ತ ಆರ್ಸಿಬಿ ತಂಡದಲ್ಲಿ 2 ಬದಲಾವಣೆ ಮಾಡಲಾಗಿದೆ. ನವ್ದೀಪ್ ಸೈನಿ ಕಮ್ಬ್ಯಾಕ್ ಮಾಡಿದ್ದು, ಡೇಲ್ ಸ್ಟೈನ್ ಬದಲು ಉಸುರು ಉದಾನ ಸ್ಥಾನ ಪಡೆದುಕೊಂಡಿದ್ದಾರೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು: ದೇವದತ್ ಪಡಿಕ್ಕಲ್, ಜೋಷ್ ಫಿಲಿಪ್, ವಿರಾಟ್ ಕೊಹ್ಲಿ (ನಾಯಕ), ಎಬಿ ಡಿವಿಲಿಯರ್ಸ್ (ವಿ.ಕೀ), ಗುರುಕೀರತ್ ಮನ್ಸಿಂಗ್, ಕ್ರಿಸ್ ಮೊರೀಸ್, ವಾಷಿಂಗ್ಟನ್ ಸುಂದರ್, ಇಸುರು ಉದಾನ, ನವ್ದೀಪ್ ಸೈನಿ, ಮೊಹಮ್ಮದ್ ಸಿರಾಜ್, ಯಜುವೇಂದ್ರ ಚಾಹಲ್.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಈ ಬಾರಿಯ ಐಪಿಎಲ್ ನಲ್ಲಿ 14 ಅಂಕಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದ್ದರೆ, 10 ಅಂಕಗಳೊಂದಿಗೆ 7ನೇ ಸ್ಥಾನದಲ್ಲಿರುವ ಹೈದರಾಬಾದ್ ತಂಡ ಉಳಿದ ಎರಡೂ ಪಂದ್ಯಗಳನ್ನು ಗೆಲ್ಲಬೇಕಿದೆ.
PublicNext
31/10/2020 07:22 pm