ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

IPL-2020 | RR vs KKR: ಟಾಸ್‌ ಗೆದ್ದು ಬೌಲಿಂಗ್‌ ಆಯ್ದುಕೊಂಡ ರಾಯಲ್ಸ್‌

ದುಬೈ: ಐಪಿಎಲ್ 13ನೇ ಆವೃತ್ತಿಯ 54 ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್‌ ತಂಡದ ನಾಯಕ ಸ್ಟೀವ್‌ ಸ್ಮಿತ್ ಬೌಲಿಂಗ್‌ ಆಯ್ಕೆ ಮಾಡಿಕೊಂಡಿದ್ದಾರೆ. ಅದರಂತೆ ಕೋಲ್ಕತ್ತಾ ನೈಟ್‌ರೈಡರ್ಸ್ ತಂಡವು ಬ್ಯಾಟಿಂಗ್ ಮಾಡಲಿದೆ.

ದುಬೈ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್‌ಗೆ ಗೆಲುವು ಅಗತ್ಯವಾಗಿದೆ. ಒಂದು ವೇಳೆ ಕೆಕೆಆರ್ ಗೆಲುವು ದಾಖಲಿಸಿದರೆ ರಾಜಸ್ಥಾನ್ ಕೂಡ ಟೂರ್ನಿಯಿಂದ ಹೊರ ಬೀಳುವ ಸಾಧ್ಯತೆ ಇದೆ.

ರಾಜಸ್ಥಾನ ತಂಡ 13 ಪಂದ್ಯಗಳಿಂದ 12 ಅಂಕ ಪಡೆದು ಪಾಯಿಂಟ್ಸ್ ಪಟ್ಟಿಯಲ್ಲಿ 6ನೇ ಸ್ಥಾನದಲ್ಲಿದೆ. ಇತ್ತ ಕೋಲ್ಕತ್ತಾ ಕೂಡ 13 ಪಂದ್ಯಗಳಿಂದ 12 ಅಂಕ ಪಡೆದು ಪಾಯಿಂಟ್ಸ್ ಪಟ್ಟಿಯಲ್ಲಿ 7ನೇ ಸ್ಥಾನದಲ್ಲಿದೆ. ಉಭಯ ತಂಡಗಳಿಗೂ ಇದು ಮಹತ್ವದ ಪಂದ್ಯವಾಗಿದ್ದು, ಉತ್ತಮ ರನ್​ರೇಟ್​ನೊಂದಿಗೆ ಪಂದ್ಯ ಗೆಲ್ಲಬೇಕಾದ ಒತ್ತಡದಲ್ಲಿದೆ.

Edited By : Vijay Kumar
PublicNext

PublicNext

01/11/2020 07:27 pm

Cinque Terre

63.73 K

Cinque Terre

16

ಸಂಬಂಧಿತ ಸುದ್ದಿ