ನವದೆಹಲಿ: ಟೀಂ ಇಂಡಿಯಾ ಮಾಜಿ ನಾಯಕ, ಆಲ್‌ರೌಂಡರ್ ಕಪಿಲ್ ದೇವ್ ಅವರ ಆರೋಗ್ಯ ಇತ್ತೀಚೆಗೆ ಹದಗೆಟ್ಟಿತ್ತು. ಅವರು ಹೃದಯಾಘಾತದ ನಂತರ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ಸದ್ಯ ಚೇತರಿಸಿಕೊಳ್ಳುತ್ತಿದ್ದಾರೆ. ಆದರೆ ಕೆಲ ಕಿಡಿಗೇಡಿಗಳು ಭಾರತಕ್ಕೆ ಮೊದಲ ವಿಶ್ವಕಪ್ ತಂದುಕೊಟ್ಟ ನಾಯಕನ ಸಾವನ್ನಪ್ಪಿದ್ದಾರೆ ಎಂದು ಪೋಸ್ಟ್ ಮಾಡಿ ವಿಕೃತಿ ಮೆರೆದಿದ್ದಾರೆ.
ಈ ಬಗ್ಗೆ ಸ್ಪಷ್ಟನೆ ನೀಡಿರುವ ಟೀಂ ಇಂಡಿಯಾ ಮಾಜಿ ಆಟಗಾರ ಮದನ್ ಲಾಲ್ ಅವರು, 'ನಮ್ಮ ಸ್ನೇಹಿತ ಕಪಿಲ್ ದೇವ್ ಚೇತರಿಕೆಯ ಹಾದಿಯಲ್ಲಿದ್ದಾರೆ. ದಿನದಿಂದ ದಿನಕ್ಕೆ ಚೇತರಿಸಿಕೊಳ್ಳುತ್ತಿದ್ದಾರೆ. ಕಪಿಲ್ ದೇವ್ ಆಸ್ಪತ್ರೆಗೆ ದಾಖಲಾದ ನಂತರ ಅವರ ಕುಟುಂಬವು ಒತ್ತಡಕ್ಕೆ ಸಿಲುಕಿದೆ. ಇಂತಹ ಸಮಯದಲ್ಲಿ ದಯವಿಟ್ಟು ಇಂತಹ ಪೋಸ್ಟ್ ಗಳನ್ನು ಹಾಕಬೇಡಿ' ಎಂದು ಮನವಿ ಮಾಡಿಕೊಂಡಿದ್ದಾರೆ.
PublicNext
02/11/2020 06:51 pm