ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ತಮಿಳುನಾಡಿನ ಟೆನಿಸ್ ಆಟಗಾರ ವಿಶ್ವ ದೀನದಯಾಳನ್ ಅಪಘಾತದಲ್ಲಿ ಸಾವು

ಶಿಲಾಂಗ್: ಭಾನುವಾರದಂದು ಶಿಲಾಂಗ್‌ನಲ್ಲಿ ನಡೆಯಲಿರುವ ರಾಷ್ಟ್ರೀಯ ಟೂರ್ನಿಯಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದ ತಮಿಳುನಾಡು ಮೂಲದ ಯುವ ಟೇಬಲ್ ಟೆನಿಸ್ ಆಟಗಾರ ವಿಶ್ವ ದೀನದಯಾಳನ್ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

18 ವರ್ಷದ ವಿಶ್ವ ಅವರು ತಂಡದ ಮೂವರು ಆಟಗಾರರ ಜೊತೆ ಗುವಾಹಟಿಯಿಂದ ಶಿಲಾಂಗ್‌ಗೆ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಮುಂಭಾಗದಿಂದ ಬಂದ 12 ಚಕ್ರಗಳ ಟ್ರೇಲರ್, ರಸ್ತೆ ವಿಭಜಕಕ್ಕೆ ಗುದ್ದಿ ನಂತರ ಕಾರಿಗೆ ಡಿಕ್ಕಿಯಾಗಿದೆ. ಪರಿಣಾಮ ಕಾರು ಚಾಲಕ ಸ್ಥಳದಲ್ಲೇ ಸಾವಿಗೀಡಾಗಿದ್ದು, ವಿಶ್ವ ಅವರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಇನ್ನು ರಮೇಶ್ ಸಂತೋಷ್ ಕುಮಾರ್, ಅವಿನಾಶ್ ಪ್ರಸನ್ನಜಿ ಮತ್ತು ಕಿಶೋರ್ ಕುಮಾರ್ ಗಂಭೀರ ಗಾಯಗೊಂಡಿದ್ದಾರೆ ಎಂದು ಭಾರತ ಟೇಬಲ್ ಟೆನಿಸ್ ಫೆಡರೇಷನ್ ತಿಳಿಸಿದೆ. ರಾಷ್ಟ್ರೀಯ ಟೂರ್ನಿಗಳಲ್ಲಿ ಸಾಕಷ್ಟು ಸಾಧನೆಗಳನ್ನು ಮಾಡಿರುವ ವಿಶ್ವ ಅವರು ಅಂತಾರಾಷ್ಟ್ರೀಯ ಟೂರ್ನಿಗಳಲ್ಲೂ ಪದಕ ಗಳಿಸಿದ್ದಾರೆ. ಇದೇ 27ರಿಂದ ಆಸ್ಟ್ರಿಯಾದ ಲಿನ್ಜ್‌ನಲ್ಲಿ ನಡೆಯಲಿರುವ ಡಬ್ಲ್ಯುಟಿಟಿ ಯೂತ್ ಕಂಟೆಂಡರ್‌ನಲ್ಲಿ ಅವರು ಪಾಲ್ಗೊಳ್ಳಬೇಕಾಗಿತ್ತು.

Edited By : Nagaraj Tulugeri
PublicNext

PublicNext

18/04/2022 03:42 pm

Cinque Terre

44.88 K

Cinque Terre

3

ಸಂಬಂಧಿತ ಸುದ್ದಿ