ದುಬೈ: ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್ ಅಬ್ಬರದ ಅರ್ಧಶತಕ ಹಾಗೂ ಕೊನೆಯಲ್ಲಿ ಹಾರ್ದಿಕ್ ಪಾಂಡ್ಯ ಸ್ಫೋಟಕ ಬ್ಯಾಟಿಂಗ್‌ನಿಂದ ಮುಂಬೈ ಇಂಡಿಯನ್ಸ್ ತಂಡವು ಡೆಲ್ಲಿ ಕ್ಯಾಪಿಟಲ್ಸ್‌ಗೆ 201 ರನ್‌ಗಳ ಗುರಿ ನೀಡಿದೆ.
ದುಬೈ ಅಂತರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ 13ನೇ ಆವೃತ್ತಿಯ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ರೋಹಿತ್ ಶರ್ಮಾ ಪಡೆಯು 5 ವಿಕೆಟ್ ನಷ್ಟಕ್ಕೆ 200 ರನ್ ಚಚ್ಚಿದೆ. ಮುಂಬೈ ಪರ ಇಶಾನ್ ಕಿಶನ್ ಅಜೇಯ 55 ರನ್, ಸೂರ್ಯಕುಮಾರ್ ಯಾದವ್ 51 ರನ್, ಹಾರ್ದಿಕ್ ಪಾಂಡ್ಯ ಅಜೇಯ 37 ರನ್ ಹಾಗೂ ಕ್ವಿಂಟನ್ ಡಿಕಾಕ್ 40 ರನ್ ಪೇರಿಸಿದರು.
ನಾಯಕ ರೋಹಿತ್ ಶರ್ಮಾ ಹಾಗೂ ಕೀರೊನ್ ಪೊಲಾರ್ಡ್ ಯಾವುದೇ ರನ್ ಗಳಿಸದೆ ವಿಕೆಟ್ ಒಪ್ಪಿಸಿ ಪೆವಿಲಿಯನ್‌ಗೆ ತೆರಳಿದರೆ, ಕೃನಾಲ್ ಪಾಂಡ್ಯ 13 ರನ್ ಕೊಡುಗೆ ನೀಡಿದರು. ಡೆಲ್ಲಿ ಪರ ಆರ್.ಅಶ್ವಿನ್ ಪ್ರಮುಖ ಮೂರು ವಿಕೆಟ್ ಉರುಳಿಸಿ ಮಿಂಚಿದರೆ, ಮಾರ್ಕಸ್ ಸ್ಟೋಯಿನಿಸ್ ಹಾಗು ಅನ್ರಿಕ್ ನಾರ್ಟ್ಜೆ ತಲಾ ಒಂದು ವಿಕೆಟ್ ಕಿತ್ತು ತಂಡಕ್ಕೆ ಆಸರೆಯಾದರು.
PublicNext
05/11/2020 09:21 pm