ದುಬೈ: ಮುಂಬೈ ಇಂಡಿಯನ್ಸ್ ಬ್ಯಾಟ್ಸ್‌ಮನ್ ಸೂರ್ಯಕುಮಾರ್ ಯಾದವ್ ಅವರು ಇದುವರೆಗೆ ಅಂತಾರಾಷ್ಟ್ರೀಯ ಪಂದ್ಯವನ್ನು ಆಡದೆ 100 ಐಪಿಎಲ್ ಪಂದ್ಯಗಳನ್ನು ಆಡಿದ ಮೊದಲ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ದುಬೈನಲ್ಲಿ ಗುರುವಾರ ನಡೆದ ಕ್ವಾಲಿಫೈಯರ್ ಮೊದಲ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ 38 ಎಸೆತಗಳ 51 ರನ್ ಚಚ್ಚಿದ್ದರು. ಇದು ಅವರ 100ನೇ ಐಪಿಎಲ್ ಪಂದ್ಯವಾಗಿತ್ತು. ಅಂತರರಾಷ್ಟ್ರೀಯ ಪಂದ್ಯಕ್ಕೆ ಪಾದಾರ್ಪಣೆ ಮಾಡುವುದಕ್ಕೂ ಮುನ್ನ ಐಪಿಎಲ್‌ನಲ್ಲಿ 2,000ಕ್ಕಿಂತ ಹೆಚ್ಚು ರನ್ ಗಳಿಸಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಅವರು ಪಾತ್ರರಾಗಿದ್ದಾರೆ. ಸೂರ್ಯಕುಮಾರ್ ಒಟ್ಟು 164 ಟಿ20 ಪಂದ್ಯಗಳನ್ನು ಆಡಿದ್ದಾರೆ.
PublicNext
06/11/2020 04:57 pm