ಅಬುಧಾಬಿ: ಐಪಿಎಲ್ 13ನೇ ಆವೃತ್ತಿಯ ಕ್ವಾಲಿಫೈಯರ್-2ನೇ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ನಾಯಕ ಶ್ರೇಯಸ್ ಅಯ್ಯರ್ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.
ಅಬುಧಾಬಿ ಶೇಕ್ ಝಯೇದ್ ಕ್ರೀಡಾಂಗಣದಲ್ಲಿನಡೆಯುತ್ತಿರುವ ಮಹತ್ವದ ಪಂದ್ಯದಲ್ಲಿ ಗೆದ್ದ ತಂಡವು ಫೈನಲ್ಗೇರಲಿದೆ. ಹೈದರಾಬಾದ್ ತಂಡದಲ್ಲಿ ಯಾವುದೇ ಬದಲಾವಣೆ ಮಾಡದೆ ಕಳೆದ ಗೆದ್ದ ತಂಡವೇ ಕಣಕ್ಕಿಳಿಯುತ್ತಿದೆ. ಆದರೆ ಕ್ಯಾಪಿಟಲ್ಸ್ ತಂಡದಲ್ಲಿ ಬದಲಾವಣೆ ಎರಡು ಮಾಡಲಾಗಿದ್ದು, ಪ್ರವೀಣ್ ದುಬೆ ಮತ್ತು ಶಿಮ್ರೋನ್ ಹೆಟ್ಮೇರ್ ತಂಡಕ್ಕೆ ಕಮ್ಬ್ಯಾಕ್ ಮಾಡಿದ್ದಾರೆ.
ಡೆಲ್ಲಿ: ಶ್ರೇಯಸ್ ಅಯ್ಯರ್ (ನಾಯಕ), ಶಿಖರ್ ಧವನ್, ಅಜಿಂಕ್ಯಾ ರಹಾನೆ, ರಿಷಭ್ ಪಂತ್, ಶಿಮ್ರೋನ್ ಹೆಟ್ಮೇರ್, ಮಾರ್ಕಸ್ ಸ್ಟೊಯಿನಿಸ್, ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಪ್ರವೀನ್ ದುಬೆ, ಕಗಿಸೊ ರಬಡಾ, ಆನ್ರಿಚ್ ನಾರ್ಟ್ಜೆ.
ಹೈದರಾಬಾದ್: ಡೇವಿಡ್ ವಾರ್ನರ್ (ನಾಯಕ), ಶ್ರೀವತ್ಸ್ ಗೋಸ್ವಾಮಿ (ವಿ.ಕೀ), ಕೇನ್ ವಿಲಿಯಮ್ಸನ್, ಮನೀಷ್ ಪಾಂಡೆ, ಜೇಸನ್ ಹೋಲ್ಡರ್, ಪ್ರಿಯಂ ಗರ್ಗ್, ಶಹ್ಬಾಜ್ ನದೀಂ, ರಶೀದ್ ಖಾನ್, ಅಬ್ದುಲ್ ಸಮದ್, ಸಂದೀಪ್ ಶರ್ಮಾ, ಟಿ. ನಟರಾಜನ್.
PublicNext
08/11/2020 07:14 pm