4 ಬಾರಿಯ ಚಾಂಪಿಯನ್ ಮುಂಬೈಗೆ ಮೊದಲ ಸಲ ಫೈನಲ್ ಗೆ ಏರಿದ ಡೆಲ್ಲಿ ಸವಾಲು ಅಯ್ಯರ್ ಪಡೆ ಗೆದ್ದರೆ ಇತಿಹಾಸ; ಟ್ರೋಫಿ ಉಳಿಸಿಕೊಳ್ಳುವ ಯೋಜನೆಯಲ್ಲಿ ಮುಂಬೈ
ಇಂದು ದುಬೈನಲ್ಲಿ ನಡೆಯುವ ಐಪಿಎಲ್ ನ ಫೈನಲ್ ಪಂದ್ಯದಲ್ಲಿ ರೋಹಿತ್ ಶರ್ಮ ನಾಯಕತ್ವದ ಮುಂಬೈ ಇಂಡಿಯನ್ಸ್ ಹಾಗೂ ಶ್ರೇಯಸ್ ಅಯ್ಯರ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಮುಖಾಮುಖಿಯಾಗಲಿವೆ.
ಮುಂಬೈ ಇಂಡಿಯನ್ಸ್ ತಂಡ ಈಗಾಗಲೇ ನಾಲ್ಕು ಬಾರಿ ಟ್ರೋಫಿ ಗೆದ್ದಿದ್ದು ಈ ತಂಡ ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡರಲ್ಲೂ ಸ್ಟ್ರಾಂಗ್ ಇದೆ.
ಡೆಲ್ಲಿಗೆ ಇದು ಚೊಚ್ಚಲ ಫೈನಲ್ ಗೆದ್ದರೆ ಇತಿಹಾಸ
ಡೆಲ್ಲಿ ಕ್ಯಾಪಿಟಲ್ಸ್ ತಂಡ ಮೊಟ್ಟ ಮೊದಲ ಬಾರಿಗೆ ಫೈನಲ್ ಪ್ರವೇಶಿಸಿದ್ದು ಈ ಬಾರಿ ತನ್ನ ಚೊಚ್ಚಲ ಟ್ರೋಫಿ ಎತ್ತಿ ಹಿಡಿಯುವ ತವಕದಲ್ಲಿದೆ.
ಉತ್ತಮ ಬ್ಯಾಟಿಂಗ್ ಪ್ರದರ್ಶನ ತೋರುತ್ತಲೇ ಇರುವ ಶಿಖರ್ ಧವನ್ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಗೆಲುವು ತಂದುಕೊಡ್ತಾರ ನೋಡಬೇಕಿದೆ.
ಇಂದು ಉಭಯ ತಂಡಗಳ ಹೋರಾಟದಲ್ಲಿ ಹೆದ್ದು ಬಿಗುವವರಾರು ಎನ್ನುವುದನ್ನು ಕಾದು ನೋಡಬೇಕಿದೆ.
ಇಂದಿನ ಹಣಾಹಣಿಯನ್ನು ಕಣ್ತುಂಬಿಸಿಕೊಳ್ಳಲು ಕ್ರಿಕೆಟ್ ಅಭಿಮಾನಿಗಳೆಲ್ಲ ತುದಿಗಾಲಲ್ಲಿ ನಿಂತಿದ್ದಾರೆ.
ಸಂಭಾವ್ಯ ತಂಡಗಳು
ಮುಂಬೈ ಇಂಡಿಯನ್ಸ್: ರೋಹಿತ್ ಶರ್ಮ (ನಾಯಕ), ಕ್ವಿಂಟನ್ ಡಿ ಕಾಕ್, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ಕೃಣಾಲ್ ಪಾಂಡ್ಯ, ಕೈರನ್ ಪೊಲಾರ್ಡ್, ಹಾರ್ದಿಕ್ ಪಾಂಡ್ಯ, ಜೇಮ್ಸ್ ಪ್ಯಾಟಿನ್ಸನ್, ರಾಹುಲ್ ಚಹರ್, ಟ್ರೆಂಟ್ ಬೌಲ್ಟ್, ಜಸ್ಪ್ರೀತ್ ಬುಮ್ರಾ.
ಡೆಲ್ಲಿ: ಶಿಖರ್ ಧವನ್, ಮಾರ್ಕಸ್ ಸ್ಟೋಯಿನಿಸ್, ಅಜಿಂಕ್ಯ ರಹಾನೆ, ಶ್ರೇಯಸ್ ಅಯ್ಯರ್ (ನಾಯಕ), ರಿಷಭ್ ಪಂತ್, ಶಿಮ್ರನ್ ಹೆಟ್ಮೈರ್, ಅಕ್ಷರ್ ಪಟೇಲ್, ಆರ್. ಅಶ್ವಿನ್, ಕಾಗಿಸೊ ರಬಾಡ, ಅನ್ರಿಚ್ ನೋರ್ಜೆ, ಪ್ರವೀಣ್ ದುಬೆ.
PublicNext
10/11/2020 11:46 am