ದುಬೈ: ಐಪಿಎಲ್ 13ನೇ ಆವೃತ್ತಿಯ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ನಾಯಕ ಶ್ರೇಯಸ್ ಅಯ್ಯರ್ ಅವರು ಮುಂಬೈ ಇಂಡಿಯನ್ಸ್ ವಿರುದ್ಧ ಬ್ಯಾಟಿಂಗ್ ಆಯ್ದುಕೊಂಡಿದೆ.
ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ರೋಹಿತ್ ಶರ್ಮಾ ನೇತೃತ್ವದ ಮುಂಬೈ ಇಂಡಿಯನ್ಸ್ ಹಾಗೂ ಶ್ರೇಯಸ್ ಅಯ್ಯರ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಟ್ರೋಫಿಗೆ ಮುತ್ತಿಕ್ಕಲು ಹೋರಾಟ ನಡೆಸುತ್ತಿವೆ. ನಾಲ್ಕು ಬಾರಿ ಚಾಂಪಿಯನ್ ಆಗಿರುವ ಮುಂಬೈ ತಂಡವು ಈ ಬಾರಿಯೂ ಗೆಲ್ಲುವ ನಿರೀಕ್ಷೆಯಲ್ಲಿದ್ದರೆ, ಡೆಲ್ಲಿ ಕ್ಯಾಪಿಟಲ್ಸ್ ಚೊಚ್ಚಲ ಟ್ರೋಫಿ ಮೇಲೆ ಕಣ್ಣಿಟ್ಟಿದೆ.
ಮುಂಬೈ ಇಂಡಿಯನ್ಸ್: ಕ್ವಿಂಟನ್ ಡಿ ಕಾಕ್ (ವಿ.ಕೀ), ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ಕೀರನ್ ಪೊಲಾರ್ಡ್, ಕ್ರುನಾಲ್ ಪಾಂಡ್ಯ, ಹಾರ್ದಿಕ್ ಪಾಂಡ್ಯ, ನಥನ್ ಕಲ್ಟರ್ ನೈಲ್, ಜಯಂತ್ ಯಾದವ್, ಜಸ್ಪ್ರೀತ್ ಬುಮ್ರಾ, ಟ್ರೆಂಟ್ ಬೌಲ್ಟ್.
ಡೆಲ್ಲಿ ಕ್ಯಾಪಿಟಲ್ಸ್: ಶಿಖರ್ ಧವನ್, ಅಜಿಂಕ್ಯಾ ರಹಾನೆ, ಶ್ರೇಯಸ್ ಅಯ್ಯರ್ (ನಾಯಕ), ರಿಷಭ್ ಪಂತ್, ಶಿಮ್ರೋನ್ ಹೆಟ್ಮೇರ್, ಮಾರ್ಕಸ್ ಸ್ಟೊಯಿನಿಸ್, ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಪ್ರವೀಣ್ ದುಬೆ, ಕಗಿಸೊ ರಬಡಾ, ಆನ್ರಿಚ್ ನಾರ್ಟ್ಜೆ.
PublicNext
10/11/2020 07:13 pm