ನವದೆಹಲಿ: ಟೀಂ ಇಂಡಿಯಾ ಮಾಜಿ ಆಟಗಾರ ವಿರೇಂದ್ರ ಸೆಹ್ವಾಗ್ ಐಪಿಎಲ್ 2020ರ ತಂಡವನ್ನು ಪ್ರಕಟಿಸಿದ್ದು, ಕನ್ನಡಿಗರಾದ ಕೆಎಲ್ ರಾಹುಲ್ ಹಾಗೂ ದೇವ್‍ದತ್ ಪಡಿಕ್ಕಲ್ ಅವರಿಗೆ ಆರಂಭಿಕ ಆಟಗಾರರ ಸ್ಥಾನವನ್ನು ನೀಡಿದ್ದಾರೆ.
ಸೆಹ್ವಾಗ್ ಅವರು ಐಪಿಎಲ್ 13ನೇ ಆವೃತ್ತಿಯಲ್ಲಿ ಕ್ರಿಕೆಟಿಗರು ತೋರಿದ ಪ್ರದರ್ಶನದ ಆಧಾರದ ಮೇಲೆ ತಂಡವನ್ನು ಆಯ್ಕೆ ಮಾಡಿದ್ದಾರೆ. ತಮ್ಮ ತಂಡದ ಒನ್ ಡೌನ್ ಆಟಗಾರನಾಗಿ ಸೂರ್ಯಕುಮಾರ್ ಯಾದವ್ ಅವರನ್ನು ಆಯ್ಕೆ ಮಾಡಿದ್ದು, ನಾಯಕತ್ವ ಜವಾಬ್ದಾರಿಯನ್ನು ಆರ್‌ಸಿಬಿ ನಾಯಕ ವಿರಾಟ್ ಕೊಹ್ಲಿಅವರಿಗೆ ನೀಡಿದ್ದಾರೆ.
ಉಳಿದಂತೆ ಬ್ಯಾಟಿಂಗ್ ವಿಭಾಗದಲ್ಲಿ ಡೇವಿಡ್ ವಾರ್ನರ್, ಎಬಿ ಡಿವಿಲಿಯರ್ಸ್ ಇದ್ದರೆ, ಬೌಲಿಂಗ್ ವಿಭಾಗದಲ್ಲಿ ವೇಗದ ಬೌಲರ್ ರಬಡಾ, ಜಸ್‌ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ ಅವರಿದ್ದಾರೆ. ಸ್ಪಿನ್ ಬೌಲಿಂಗ್ ವಿಭಾಗದಲ್ಲಿ ಯಜುವೇಂದ್ರ ಚಹಲ್, ರಶೀದ್ ಖಾನ್‌ಗೆ ಆಡುವ 11ರ ಬಳಗದಲ್ಲಿ ಸ್ಥಾನ ನೀಡಿದ್ದಾರೆ. ಇಶಾನ್ ಕಿಶಾನ್, ಜೋಫ್ರಾ ಅರ್ಚರ್ ಅವರನ್ನು 12 ಮತ್ತು 13ನೇ ಆಟಗಾರರಾಗಿ ಆಯ್ಕೆ ಮಾಡಿಕೊಂಡಿದ್ದಾರೆ.
PublicNext
11/11/2020 07:51 pm