ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಇಂಡೋ-ಆಸಿಸ್ ಸರಣಿ: ಟೀಂ ಇಂಡಿಯಾ ನ್ಯೂ ಲುಕ್‌ನಲ್ಲಿ ಎಂಟ್ರಿ

ನವದೆಹಲಿ: ಆಸ್ಟ್ರೇಲಿಯಾ ವಿರುದ್ಧದ ಸೀಮಿತ ಓವರ್‌ಗಳ ಸರಣಿಗೆ ಟೀಂ ಇಂಡಿಯಾ ವಿಶೇಷ ಜರ್ಸಿಯಲ್ಲಿ ಕಾಣಿಸಿಕೊಳ್ಳಲಿದೆ ಎಂಬ ಸುದ್ದಿ ಎಲ್ಲೆಡೆ ಹರಿದಾಡುತ್ತಿದೆ.

ಬಿಸಿಸಿಐ ತನ್ನ ಟ್ವಿಟ್ಟರ್‌ ಖಾತೆಯಲ್ಲಿ ಆಟಗಾರರು ಜರ್ಸಿ ಮೇಲೆ ಜರ್ಕಿನ್ ಹಾಕಿಕೊಂಡ ಫೋಟೋಗಳನ್ನು ಟ್ವೀಟ್ ಮಾಡಿದೆ. ಆದರೆ ಜರ್ಸಿ ವಿನ್ಯಾಸದ ಬಗ್ಗೆ ಖಚಿತವಾಗಿ ಯಾವುದೇ ಮಾಹಿತಿಯನ್ನು ನೀಡಿಲ್ಲ. ಅಭಿಮಾನಿಗಳು ಮಾತ್ರ ಈ ಬಗ್ಗೆ ಈಗಾಗಲೇ ಸಾಕಷ್ಟು ಕುತೂಹಲವನ್ನು ವ್ಯಕ್ತಪಡಿಸುತ್ತಿದ್ದಾರೆ.

ಔಟ್‌ಲುಕ್ ಪತ್ರಿಕೆಯ ವರದಿಯ ಪ್ರಕಾರ, ಟೀಂ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ರೆಟ್ರೋ ಜರ್ಸಿಯಲ್ಲಿ ಕಾಣಿಸಿಕೊಳ್ಳಲಿದೆ ಎನ್ನಲಾಗುತ್ತಿದೆ. ಈ ಹಿನ್ನೆಲೆ 70-80ರ ದಶಕದಲ್ಲಿ ಕಡು ನೀಲಿ ಬಣ್ಣದ ಜರ್ಸಿಯಲ್ಲಿ ಭಾರತೀಯ ಕ್ರಿಕೆಟ್ ತಂಡವನ್ನು ನೋಡಲು ಅಭಿಮಾನಿಗಳು ಕಾತುರರಾಗಿದ್ದಾರೆ.

ಇತ್ತ ಆಸ್ಟ್ರೇಲಿಯಾ ಕೂಡ ಹೊಸ ಜರ್ಸಿಯನ್ನು ರಿವೀಲ್ ಮಾಡಿದೆ. ಈ ಸರಣಿಯಲ್ಲಿ ಟೀಂ ಇಂಡಿಯಾ ಹಾಗೂ ಆಸ್ಟ್ರೇಲಿಯಾ 3 ಏಕದಿನ, 3 ಟಿ20 ಹಾಗೂ 4 ಟೆಸ್ಟ್ ಪಂದ್ಯಗಳಲ್ಲಿ ಮುಖಾಮುಖಿಯಾಗಲಿದೆ.

Edited By : Vijay Kumar
PublicNext

PublicNext

12/11/2020 03:24 pm

Cinque Terre

53.81 K

Cinque Terre

2