ನವದೆಹಲಿ: ಮುಂದಿನ ಕೆಲವೇ ತಿಂಗಳಲ್ಲಿ ಮತ್ತೊಂದು ಇಂಡಿಯನ್ ಪ್ರೀಮಿಯರ್ ಲೀಗ್ ನಡೆಸಲು ಬಿಸಿಸಿಐ ಪ್ಲ್ಯಾನ್ ರೂಪಿಸುತ್ತಿದೆ. ಅಷ್ಟೇ ಅಲ್ಲದೆ ಕೆಲ ಮಹತ್ವದ ಬದಲಾವಣೆಗಳ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
2021ರ ಐಪಿಎಲ್ ಟೂರ್ನಿಯಲ್ಲಿ ಮತ್ತೊಂದು ತಂಡವನ್ನು ಸೇರ್ಪಡೆಗೊಳಿಸುವುದು ಬಹುತೇಕ ಖಚಿತವಾಗಿದೆ. ದೀಪಾವಳಿಯ ಬಳಿಕ ಈ ಬಗ್ಗೆ ಪ್ರಮುಖ ಬೆಳವಣಿಗೆಗಳು ನಡೆಯುವ ಸಾಧ್ಯತೆಯಿದೆ. ಆದರೆ ಹೊಸ ತಂಡವು ಯಾವ ನಗರವನ್ನು ಪ್ರತಿನಿಧಿಸಲಿದೆ? ಮಾಲೀಕರು ಹಾಗೂ ನಾಯಕ ಯಾರು? ಎಂಬುದು ಭಾರೀ ಕುತೂಹಲಕ್ಕೆ ಕಾರಣವಾಗಿದೆ.
ಐಪಿಎಲ್‌ನಲ್ಲಿ ಆಡುವ 11 ಆಟಗಾರರ ಬಳಗದಲ್ಲಿ ನಾಲ್ಕು ವಿದೇಶಿ ಆಟಗಾರರಿಗೆ ಮಾತ್ರವೇ ತಂಡದಲ್ಲಿ ಕಾಣಿಸಿಕೊಳ್ಳುವ ಅವಕಾಶವಿರುತ್ತದೆ. ಆದರೆ ಮುಂದಿನ ಬಾರಿ ನಾಲ್ಕು ಆಟಗಾರರ ಬದಲಿಗೆ ಮತ್ತೋರ್ವ ವಿದೇಶಿ ಆಟಗಾರನನ್ನು ಸೇರಿಸಿಕೊಳ್ಳುವ ಬಗ್ಗೆ ಬಿಸಿಸಿಐ ಚಿಂತನೆ ನಡೆಸಿದೆ. ಹೊಸ ವಿದೇಶಿ ಆಟಗಾರರಿಗೆ ಅವಕಾಶ ಸೇರಿದಂತೆ ಅನೇಕ ಬದಲಾವಣೆ ತರುವ ಸಾಧ್ಯತೆ ಇದೆ.
PublicNext
13/11/2020 03:25 pm