ನವದೆಹಲಿ: ಟೀಂ ಇಂಡಿಯಾದ ಮಾಜಿ ಕ್ರಿಕೆಟರ್ ಸುರೇಶ್ ರೈನಾ ಅವರು ಉತ್ತರ ಪ್ರದೇಶ, ಜಮ್ಮು ಹಾಗೂ ಕೆಲ ಕೇಂದ್ರಾಡಳಿತ ಪ್ರದೇಶಗಳಲ್ಲಿನ ಒಟ್ಟು 34 ಸರ್ಕಾರಿ ಶಾಲೆಗಳಿಗೆ ಕುಡಿಯುವ ನೀರು ಮತ್ತು ಶೌಚಾಲಯ ವ್ಯವಸ್ಥೆಗಳನ್ನು ಕಲ್ಪಿಸಲು ಮುಂದಾಗಿದ್ದಾರೆ.
ನವೆಂಬರ್ 27ರಂದು ರೈನಾ ತಮ್ಮ 34ನೇ ವಸಂತಕ್ಕೆ ಕಾಲಿಡಲಿದ್ದಾರೆ. ರೈನಾ ತಮ್ಮ 34ನೇ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಈ ಸಾಮಾಜಿಕ ಕಾರ್ಯಕ್ಕೆ ಕೈ ಹಾಕಲಿದ್ದಾರೆ. ರೈನಾ ತಮ್ಮ ಪುತ್ರಿಯ ಹೆಸರಿನಲ್ಲಿ ಆರಂಭಿಸಿರುವ ಎನ್‌ಜಿಒ ಸಂಸ್ಥೆಯಾದ ಗ್ರಾಸಿಯಾ ರೈನಾ ಫೌಂಡೇಷನ್ ಮೂಲಕ ಈ ಸಮಾಜಮುಖಿ ಕೆಲಸವನ್ನು ಕೈಗೆತ್ತಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ. ಮೂಲಗಳ ಪ್ರಕಾರ 34 ಶಾಲೆಗಳಲ್ಲಿ ಇರುವ 10 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಕುಡಿಯುವ ನೀರು ಮತ್ತು ನೈರ್ಮಲ್ಯ ವ್ಯವಸ್ಥೆಗಳ ಲಾಭ ಸಿಗಲಿದೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.
PublicNext
23/11/2020 10:36 pm